ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ kalburgi saaksha tv
ಕಲಬುರಗಿ : ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಮೂವರು ಹೆಣ್ಣು ಮಕ್ಕಳೊಂದಿಗೆ ಮಹಿಳೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ.
ಈ ಘಟನೆಯಲ್ಲಿ ತಾಯಿ, ಇಬ್ಬರು ಮಕ್ಕಳು ಕೊನೆಯುಸಿರೆಳೆದಿದ್ದು, ಓರ್ವ ಮಗುವನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
28 ವರ್ಷದ ಲಕ್ಷ್ಮಿ ಏಳಕೆ (ತಾಯಿ), ಮಕ್ಕಳಾದ 6 ವರ್ಷದ ಗೌರಮ್ಮ, 1 ವರ್ಷದ ಸಾವಿತ್ರಿ ಮೃತ ದುರ್ದೈವಿಗಳಾಗಿದ್ದಾರೆ.
ಇನ್ನು ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡನ ಮನೆಯವರು ಲಕ್ಷ್ಮಿ ಅವರಿಗೆ ಕಿರುಕುಳ ನೀಡುತ್ತಿದ್ದರಂತೆ. ಇದರಿಂದ ಬೇಸತ್ತ ಮಹಿಳೆ ಗ್ರಾಮದ ಹೊರವಲಯದಲ್ಲಿರುವ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಾಗುತ್ತಿದೆ.
ಘಟನಾ ಸ್ಥಳಕ್ಕೆ ನಿಂಬರ್ಗಾ ಪೆÇಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









