ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ಇಲ್ಲಿಯವರೆಗೆ 141 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇದರಿಂದಾಗಿ ಅವರ ಹಣ ಉಳಿತಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ಹಣ, ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ 200 ಯೂನಿಟ್ ವಿದ್ಯುತ್ ಹಾಗೂ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ. ಯಾವ ಸರ್ಕಾರವೂ ಇಂತಹ ಯೋಜನೆಗಳನ್ನು ಜಾರಿಗೊಳಿಸಿರಲಿಲ್ಲ. ಆದರೆ, ನಮ್ಮ ಸರ್ಕಾರ ಹೇಳಿದಂತೆ ಮಾಡಿದೆ. ಡಯಾಲಿಸಿಸ್ ಉಚಿತ ಮಾಡಿದ್ದೀವಿ. ಆರೋಗ್ಯ ಇಲಾಖೆಯಲ್ಲಿ ದಿನೇಶ್ ಗೂಂಡು ರಾವ್ ಸುಧಾರಣೆ ಮಾಡುತ್ತಾರೆ ಎಂದು ಹೇಳಿದ್ದಾರೆ.
42 ತಾಲೂಕುಗಳಲ್ಲಿ ಹೊಸ ಡಯಾಲಿಸಿಸ್ ಕೇಂದ್ರಗಳ ಸ್ಥಾಪನೆ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ನಿತ್ಯ 6 ರೋಗಿಗಳಿಗೆ ಡಯಾಲಿಸಿಸ್ ಸೇವೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.