ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಮತ್ತು ಸಂಸದ ಡಿ.ಕೆ. ಸುರೇಶ್ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.
ಈ ಬಗ್ಗೆ ಸುರೇಶ್ ಅವರೇ ಟ್ವೀಟ್ ಮಾಡಿದ್ದು, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಈ ಹಿಂದೆ ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದರು. ಈಗ ಅವರ ತಮ್ಮ ಡಿ.ಕೆ ಸುರೇಶ್ ಅವರಿಗೂ ಕೂಡ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.