ನಾನು ಬಹಳ ಲೆಕ್ಕ ಕೇಳಿದ್ದೆ, ಎಲ್ಲದಕ್ಕೂ ಲೆಕ್ಕ ಕೊಟ್ಟಿದ್ದಾರಾ : ರೋಹಿಣಿ ಸಿಂಧೂರಿ ವಿರುದ್ಧ ಪ್ರತಾಪ್ ಸಿಂಹ ಗರಂ
ಮೈಸೂರು : ನಾನು ಬಹಳ ಲೆಕ್ಕ ಕೇಳಿದ್ದೆ. ಎಲ್ಲದಕ್ಕೂ ಲೆಕ್ಕ ಕೊಟ್ಟಿದ್ದಾರಾ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಮತ್ತೆ ಮುಗಿಬಿದ್ದಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮತ್ತೊಮ್ಮೆ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಿಡಿಕಾರಿದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿಗಳ ಸರಕಾರಿ ನಿವಾಸದಲ್ಲಿ ನಿರ್ಮಿಸಿರುವ ಸ್ವಿಮ್ಮಿಂಗ್ ಪೂಲ್ ಲೆಕ್ಕ ಎಲ್ಲಿ.? ನಾನು ಬಹಳ ಲೆಕ್ಕ ಕೇಳಿದ್ದೆ.
ಎಲ್ಲದಕ್ಕೂ ಲೆಕ್ಕ ಕೊಟ್ಟಿದ್ದಾರಾ.. ಎಂದು ಪ್ರಶ್ನಿಸಿದರು. ಇನ್ನು ಯಾವುದೋ 2.4.5 ಅಂತ ರೌಂಡ್ ಫಿಗರ್ ಲೆಕ್ಕ ಕೊಡೋದು ಅಲ್ಲ. ಲೆಕ್ಕಕೊಡೊದಾದ್ರೆ ವಸ್ತು ಹಾಗೂ ಖರ್ಚಿನ ಲೆಕ್ಕ ಕೊಡಲಿ ಎಂದರು.
ಇನ್ನು ಸ್ಟೆಪ್ ಡೌನ್ ಆಸ್ಪತ್ರೆಗಳ ಬಗ್ಗೆಯೂ ಕೇಳಿದ್ದೆ ಅದಕ್ಕೆ ಉತ್ತರ ಕೊಟ್ಟಿದ್ದಾರಾ..? ಸ್ವಿಮ್ಮಿಂಗ್ ಪೂಲ್ ಲೆಕ್ಕ ಕೇಳಿದ್ದೆ, ಅದಕ್ಕೆ ಕೊಟ್ಟಿದ್ದಾರಾ..?
ಸುಮ್ಮನೆ ಹೋಟೆಲ್ ಗಳಿಗೆ 4 ಕೊಟಿ ಅಂತ ಬರೆಯೋದಲ್ಲ. ಯಾವುದಕ್ಕೆ ಎಷ್ಟು ಅಂತ ಬಿಲ್ ಬೇಕಲ್ವಾ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.