ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಕಲಬುರ್ಗಿ ಕ್ಷೇತ್ರದ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಿಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡ ಕಾರಣ ಬೆಂಗಳೂರಿನ ಜಯದೇವ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಜಾಧವ್, ಇಂದು ಬೆಳಿಗ್ಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿತ್ತು.
ಹೀಗಾಗಿ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ಇದನ್ನೂ ಓದಿ : ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಜಾ
ನನ್ನ ಆರೋಗ್ಯವನ್ನು ತಪಾಸಣೆಯನ್ನು ಜಯದೇವ ಆಸ್ಪತ್ರೆಯ ಮುಖ್ಯಸ್ಥರಾದಂತ ಡಾ.ಮಂಜನಾಥ್ ಅವರು ನಡೆಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಯಾರೂ ಆತಂಕ ಪಡಬಾರದು ಎಂಬುದಾಗಿ ತಿಳಿಸಿದ್ದಾರೆ.