ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಮರ್ಮಾಂಗವನ್ನೇ ಕತ್ತರಿಸಿದ ಮಹಿಳೆ
ಭೋಪಾಲ್ : ಮಧ್ಯಪ್ರದೇಶದ ಸಿಧಿಯಲ್ಲಿ ಮಹಿಳೆಯೊಬ್ಬರು ಅತ್ಯಾಚಾರ ಎಸಗಲು ಪ್ರಯತ್ನಿಸಿದ ವ್ಯಕ್ತಿಯ ಮಮಾರ್ಂಗವನ್ನೇ ಕತ್ತರಿಸಿ ಹಾಕಿದ್ದಾಳೆ.
ಸಿಧಿ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಉಮಾರಿಹಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಆರೋಪಿಯನ್ನ ವಶಕ್ಕೆ ಪಡೆದಿರುವ ಪೊಲೀಸರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಮನೆಯಲ್ಲಿ ಮಹಿಳೆ ಇಬ್ಬಳೇ ಇರುವುದನ್ನ ಗಮಿಸಿದ್ದ 45 ವರ್ಷದ ವ್ಯಕ್ತಿ ಮನೆಗೆ ಬಂದಿದ್ದಾನೆ. ಈ ವೇಳೆ ಮಹಿಳೆ ತನ್ನ ಮಗನೊಂದಿಗೆ ಮನೆಯೊಳಗೆ ಇದ್ದಳು.
ಏಕಾಏಕಿ ವ್ಯಕ್ತಿ ಮನೆಗೆ ಬಂದಿದ್ದರಿಂದ ಗಾಬರಿಯಿಂದ ಬಾಲಕ ಮನೆಯಿಂದ ಓಡಿ ಹೋಗಿದ್ದಾನೆ. ಈ ವೇಳೆ ಆ ವ್ಯಕ್ತಿ ಕೀಚಕನಂತೆ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಇದರಿಂದ ಆಕ್ರೋಶಗೊಂಡ ಮಹಿಳೆ ಅಲ್ಲೇ ಪಕ್ಕದಲ್ಲಿದ್ದ ಕುಡುಗೋಲಿನಿಂದ ಆ ವ್ಯಕ್ತಿಯ ಮರ್ಮಾಂಗವನ್ನ ಕತ್ತರಿಸಿದ್ದಾಳೆ. ಬಳಿಕ ಅಲ್ಲಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ತೆರಳಿ ನಡೆದ ಘಟನೆಯನ್ನ ವಿವರಿಸಿದ್ದಾಳೆ.
ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ. ಹೆಚ್ಚನ ಚಿಕಿತ್ಸೆಗಾಗಿ ಆರೋಪಿಯನ್ನು ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.










