ಬೆಂಗಳೂರು : ಡಿ.ಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಫಿಕ್ಸ್ ಮಾಡಲು ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, “ಮಿಸ್ಟರ್ ಕಮಿಷನರ್ ಬಿ ಕೇರ್ ಪುಲ್. ಬಿಜೆಪಿ ಏಜೆಂಟ್ ರೀತಿ ನೀವು ಕೆಲಸ ಮಾಡಬಾರದು” ಎಂದು ಎಚ್ಚರಿಕೆ ರವಾನಿಸಿದ್ದಾರೆ.
ಕಾಂಗ್ರೆಸ್ ಇಂದು ರಾಜ್ಯ ಸರ್ಕಾರದ ವಿರುದ್ಧ ಜನಧ್ವನಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಕಾಂಗ್ರೆಸ್ ಕಟ್ಟಪ್ಪ ಡಿ.ಕೆ ಶಿವಕುಮಾರ್, ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗಳೂರಿನಲ್ಲಿ ನಡೆದ ಗಭೆಯಲ್ಲಿ ನೀವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದೀರಿ. ಕಾಂಗ್ರೆಸ್ ನಾಯಕರನ್ನು ಫಿಕ್ಸ್ ಮಾಡುವ ಕೆಲಸ ಮಾಡುತ್ತಿದ್ದೀರಿ. ಬಿಜೆಪಿ ಸಚಿವರಿಂದ ಇನ್ಫ್ಲೂಯೆನ್ಸ್ ಆಗಿ ಕೆಲಸ ಮಾಡುತ್ತಿದ್ದೀರಿ. ಪೊಲೀಸರು ಹೀಗೆ ಪಕ್ಷಪಾತ ಮಾಡಿದರೆ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಕೈಕಟ್ಟಿ ಕೂರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಾರ್ಟಿಯನ್ನ ಫಿಕ್ಸ್ ಮಾಡಬೇಕು ಅಂತ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಟ್ರಬಲ್ ಶೂಟರ್, ಬಿಜೆಪಿ ವಿರುದ್ಧ ಅಲ್ಲ ಪೊಲೀಸರ ವಿರುದ್ಧ ನಾವು ಹೋರಾಟ ಆರಂಭ ಮಾಡುತ್ತೇವೆ. ಮಿಸ್ಟರ್ ಕಮಿಷನರ್ ಬಿ ಕೇರ್ ಪುಲ್. ಇದನ್ನ ಮನವಿಯಾದರೂ ಅನ್ಕೊಳ್ಳಿ ಎಚ್ಚರಿಕೆ ಅಂತ ಆದರೂ ಅಂದುಕೊಳ್ಳಿ. ಗಲಭೆಯನ್ನ ಪೊಲೀಸರು ನಿಯಂತ್ರಣ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಪಕ್ಷದ ನಾಯಕರು ಇನ್ನೂ ಸತ್ತಿಲ್ಲ. ನಿಮ್ಮ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಮಂತ್ರಿಗಳು ಪ್ರಭಾವದಿಂದ ಪೊಲೀಸರು ಕಾಂಗ್ರೆಸ್ ಪಕ್ಷವನ್ನ ಫಿಕ್ಸ್ ಮಾಡಲು ಪ್ರಯತ್ನ ನಡೆಸಿರುವುದು ತಿಳಿದು ಬಂದಿದೆ. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ. ಆದ್ರೆ ಅಮಾಯಕರನ್ನ ಬಂಧಿಸೋದು ಸರಿ ಇಲ್ಲ ಎಂದು ಸರ್ಕಾರ ಹಾಗೂ ಪೊಲೀಸರಿಗೆ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು.