ಸಿಎಂ ಮಾತು ತಪ್ಪಿದ್ದಾರೆ : ಎಂಟಿಬಿ ನಾಗರಾಜ್ ಅಸಮಾಧಾನ
ಬೆಂಗಳೂರು : ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದೆ.
ಖಾತೆ ವಿಚಾರವಾಗಿ ಒಬ್ಬೊಬ್ಬರೇ ಸಚಿವರು ಕ್ಯಾತೆ ತೆಗೆಯಲು ಆರಂಭಿಸಿದ್ದಾರೆ.
ಸಚಿವ ಆನಂದ್ ಸಿಂಗ್ ಬೆನ್ನಲ್ಲೇ ಇದೀಗ ಎಂಟಿಬಿ ನಾಗರಾಜ್ ಕೂಡ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.
ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಇಂದು ಬೆಳಿಗ್ಗೆ ಆನಂದ್ ಸಿಂಗ್ ಮಾತನಾಡಿ, ಖಾತೆ ಹಂಚಿಕೆ ಬಗ್ಗೆ ಅಸಮಾಧಾನ ಹೊರ ಹಾಕಿ, ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ.