ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ವಿರುದ್ಧ ದಾಖಲಾಗಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 23ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತರು ಸಲ್ಲಿಸಿದ್ದ B ರಿಪೋರ್ಟ್‌ನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ನ್ಯಾಯಾಲಯದ ಮೊರೆ ಹೋಗಿದ್ದರು.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಕುರಿತಾಗಿ ವಿಚಾರಣೆ ನಡೆಯಿತು. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತರು ನೀಡಿದ್ದ ಕ್ಲೀನ್‌ಚಿಟ್ ಕುರಿತು ನ್ಯಾಯಾಲಯದಲ್ಲಿ ವಾದ–ಪ್ರತಿವಾದ ನಡೆಯಿತು. ದೂರುದಾರ ಪರವಾಗಿ ಲೋಕಾಯುಕ್ತರ ವರದಿಯ ಮೇಲೆ ಆಕ್ಷೇಪ ವ್ಯಕ್ತಪಡಿಸಲಾಗಿದ್ದು, ನ್ಯಾಯಾಲಯವು ಎಲ್ಲಾ ಅಂಶಗಳನ್ನು ಆಲಿಸಿತು.
ವಾದಗಳನ್ನು ಗಮನಿಸಿದ ನ್ಯಾಯಾಲಯ, ಹೆಚ್ಚಿನ ಪರಿಶೀಲನೆ ಮತ್ತು ವಿಚಾರಣೆಯ ಅಗತ್ಯವಿದೆ ಎಂದು ತಿಳಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿತು. ಈ ಪ್ರಕರಣ ಈಗಾಗಲೇ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಂದಿನ ವಿಚಾರಣೆ ಮೇಲೆಯೇ ಎಲ್ಲರ ಗಮನ ನೆಟ್ಟಿದೆ.








