ಬೆಂಗಳೂರು: ಮುಡಾ ಹಗರಣ (MUDA Scam)ದ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಅಲ್ಲದೇ, ಈ ವಿಷಯ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಸದ್ಯ ಇದೇ ವಿಚಾರವಾಗಿ ಸಿಎಂ ವಿರುದ್ಧ ಖಾಸಗಿ ವಿರುದ್ಧ ದೂರು ದಾಖಲಾಗಿದ್ದು, ಅದನ್ನು ವಿಚಾರಣೆಗೆ ಸ್ವೀಕರಿಸಬೇಕೇ? ಅಥವಾ ಬೇಡವೇ? ಎಂಬುವುದರ ಕುರಿತು ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Court of Representatives) ಪ್ರಕಟಿಸಲಿದೆ.
ಈ ಮೂಲಕ ಸಿದ್ದರಾಮಯ್ಯ (Siddaramaiah) ವಿಚಾರಣೆ ಎದುರಿಸಲಿದ್ದಾರೆಯೇ ಎಂಬುವುದು ಗೊತ್ತಾಗಲಿದೆ. ಕೋರ್ಟ್ ನೀಡುವ ಆದೇಶ ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನೀಡಿರುವ ದೂರನ್ನು ಅಭಿಯೋಜನೆಗೆ ಅನುಮತಿ ಪರಿಗಣಿಸಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆಯಿದೆ.
ಐದು ದಿನಗಳ ಹಿಂದೆಯಷ್ಟೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಹಾಗೂ ಇನ್ನಿತರರ ವಿರುದ್ಧ ದೂರು ದಾಖಲಿಸಲಾಗಿದೆ.
ದೂರುದಾರರ ಪರ ವಕೀಲರಾದ ಲಕ್ಷ್ಮಿ ಐಯ್ಯಂಗಾರ್ ವಾದ ಮಂಡಿಸಿದ್ದರು. ಮುಡಾ ಹಗರಣದ ವಿಚಾರದಲ್ಲಿ ತಕ್ಷಣಕ್ಕೆ ಅಭಿಯೋಜನೆಯ ಅಗತ್ಯ ಇಲ್ಲ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಿದೆ.