ಮೈಸೂರು: ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಸ್ವಾಗತಕ್ಕೆ ಆಗಮಿಸಿದ್ದ ಮುಡಾ (MUDA) ಅಧ್ಯಕ್ಷ ಕೆ.ಮರಿಗೌಡಗೆ (Marigowda) ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಿಡಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ವಿರುದ್ಧ ಘೋಷಣೆ ಕೂಗಿದ್ದಾರೆ. ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ ಮರಳಿ ಕಳುಹಿಸಿದ್ದಾರೆ.
ಈ ಸಂದರ್ಭದಲ್ಲಿ ಮರೀಗೌಡ ಸಮಜಾಯಿಸಿ ನೀಡಲು ಮುಂದಾದರು. ಆಗ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಿನ್ನ ಭಾಷಣ ಬೇಡ ಹೊರಡು ಎಂದು ಬಲವಂತವಾಗಿ ಕಾರು ಹತ್ತಿಸಿ ಕಳುಹಿಸಿದ್ದಾರೆ. ಇಂದು ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಮೈಸೂರು ನಗರಕ್ಕೆ ತೆರಳಿದ್ದಾರೆ.
ನಂತರ ಮೈಸೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.