ಮೈಸೂರು: ಮುಡಾ ಹಗರಣ (MUDA Scam Case)ಕ್ಕೆ ಸಂಬಧಿಸಿದಂತೆ ಎರಡು ದಿನಗಳ ಇ.ಡಿ ದಾಳಿ ಅಂತ್ಯವಾಗಿದ್ದು, ಸತತ 17 ಗಂಟೆಗಳ ವಿಚಾರಣೆ ಅಂತ್ಯವಾಗಿದೆ.
ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ಬರೋಬ್ಬರಿ 17 ಗಂಟೆಗಳ ವಿಚಾರಣೆ ನಡೆಸಿದ್ದರು. ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯರಾತ್ರಿ 2.40ರ ವರೆಗೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಲ್ಲದೇ, ಈ ವೇಳೆ ಹಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿ ಅವರು ಮರಳಿ ನೀಡಿದ್ದ 14 ನಿವೇಶನ ಹಾಗೂ ಮುಡಾದಲ್ಲಿ 50:50 ಅನುಪಾತದಡಿಯಲ್ಲಿ ನಡೆದಿರುವ ಅಕ್ರಮದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಮುಡಾದಲ್ಲಿ ನಡೆದಿರುವ ಅಕ್ರಮದ ಕುರಿತು ಅಧಿಕಾರಿಗಳು ಇಂಚಿಂಚು ಮಾಹಿತಿ ಪಡೆದಿದ್ದಾರೆ.
ಮೊದಲ ದಿನ 12 ಗಂಟೆ, ಎರಡನೇ ದಿನ 17 ಗಂಟೆ ವಿಚಾರಣೆ ನಡೆಸಲಾಗಿದೆ.