ಪಂಚಭೂತಗಳಲ್ಲಿ ಲೀನರಾದ ಮುಲಾಯಂ ಸಿಂಗ್ ಯಾದವ್….
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಸೈಫೀಯಲ್ಲಿ ಸಕಲ ಸರ್ಕಾರಿ ಗೌರವ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು. ಪುತ್ರ ಅಖಿಲೇಶ್ ಯಾದವ್ ಮುಲಾಯಂ ಸಿಂಗ್ ಯಾದವ್ ಚಿತೆಗೆ ಅಗ್ನಿ ಸ್ಪರ್ಷ ಮಾಡಿದರು . ಮುಲಾಯಂ ಅವರ ಅಂತ್ಯಸಂಸ್ಕಾರವನ್ನ ಅವರ ಮೊದಲ ಪತ್ನಿ ಮಾಲ್ತಿ ಅವರ ಸ್ಮಾರಕದ ಬಳಿಯೇ ನಡೆಸಲಾಯಿತು.
ಮುಲಾಯಂ ಅವರ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಕೇಂದ್ರ ಸರ್ಕಾರದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಯೋಗ ಗುರು ಬಾಬಾ ರಾಮ್‌ದೇವ್, ಎಸ್‌ಪಿ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಮುಲಾಯಂ ಅವರಿಗೆ ಅಂತಿಮ ನಮನ ಸಲ್ಲಿಸಿದರು.
Last rites of Samajwadi Party founder #MulayamSinghYadav performed with full hounours in Saifai, his native village in Etawah district of Uttar Pradesh. pic.twitter.com/yYPodKJK1O
— All India Radio News (@airnewsalerts) October 11, 2022
ಇವರಷ್ಟೆ ಅಲ್ಲದೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಅವರ ಪುತ್ರಿ ಸುಪ್ರಿಯಾ ಸುಳೆ, ಬಿಜೆಪಿ ಸಂಸದ ವರುಣ್ ಗಾಂಧಿ, ಮೇನಕಾ ಗಾಂಧಿ, ಆರ್‌ಎಲ್‌ಡಿ ಅಧ್ಯಕ್ಷ ಜಯಂತ್ ಚೌಧರಿ, ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ಸಹಾರಾ, ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಕೂಡ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಯುಪಿಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಿದ್ದಾರೆ. ಬಿಹಾರದಲ್ಲೂ ಒಂದು ದಿನ ಶೋಕಾಚರಣೆ ಘೋಷಿಸಲಾಗಿತ್ತು. ಸೋಮವಾರ ಬೆಳಗ್ಗೆ 8:16ಕ್ಕೆ ಮೇದಾಂತದಲ್ಲಿ ಆಸ್ಪತ್ರೆಯಲ್ಲಿ ವಯೋ ಸಹಜ ಕಾಯಿಲೆಗಳಿಂದ ಮುಲಾಯಂ ಕೊನೆಯುಸಿರೆದಿದ್ದರು.
Mulayam Singh Yadav funeral updates: Samajwadi Party founder cremated in Uttar Pradesh’s Saifai