mullayanagiri ಮುಳ್ಳಯ್ಯನಗಿರಿಗೆ ಬರುವ ಪ್ರವಾಸಿಗರಿಗೆ ಕೊರೊನಾ ಟೆಸ್ಟ್ ಕಡ್ಡಾಯ
ಚಿಕ್ಕಮಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಲ್ಲೋಲ್ಲ ಕಲ್ಲೋಲಗಳನ್ನ ಸೃಷ್ಠಿ ಮಾಡುವ ಸೂಚನೆಗಳನ್ನ ಕೊಡುತ್ತಿದೆ.
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಇದರಿಂದ ಎಚ್ಚೆತ್ತುಕೊಂಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ ಮುಳ್ಳಯ್ಯನಗಿರಿಗೆ ಆಗಮಿಸುವ ಪ್ರವಾಸಿಗರಿಗೆ ಕೊರೊನಾ ಟೆಸ್ಟ್ ಫಲಿತಾಂಶ ಕಡ್ಡಾಯಗೊಳಿಸಿದೆ.
ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಿಂದ ಬರುವ ಜನರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಮಾಡಿದೆ.
ಒಂದು ವೇಳೆ ಪರೀಕ್ಷೆಗೆ ಒಳಪಡದೇ ಬಂದಿದ್ದರರೇ ಅಂತವರು ತಾಲೂಕಿನ ಕೈಮರ್ ಚೆಕ್ ಪೋಸ್ಟ್ ನಲ್ಲಿ ಪರೀಕ್ಷೆಗೆ ಒಳಪಡಬೇಕಾಗುತ್ತದೆ.
ಕೆಲ ಪ್ರವಾಸಿಗರು ಕೋವಿಡ್ ಟೆಸ್ಟ್ ಗೆ ಒಳಪಡಲು ಹಿಂದೇಟು ಹಾಕುತ್ತಿದ್ದು ಅವರನ್ನು ಅಧಿಕಾರಿಗಳು ವಾಪಸ್ ಕಳಿಸುತ್ತಿದ್ದಾರೆ.
ನಿನ್ನೆ ಇಬ್ಬರು ಪ್ರವಾಸಿಗರಿಗೆ ರ್ಯಾಪಿಡ್ ಟೆಸ್ಟ್ ವೇಳೆ ಪಾಸಿಟಿವ್ ಬಂದಿದ್ದು, ಅವರನ್ನ ಪ್ರವಾಸಿ ತಾಣಕ್ಕೆ ತೆರಳಲು ಅವಕಾಶ ಕೊಡದೆ ವಾಪಸ್ ಕಳಿಸಿದ್ದಾರೆ.
