6 ವರ್ಷದ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್
ಮುಂಬೈ : 6 ವರ್ಷದ ಬಾಲಕಿಯ ಮೇಲೆ ಅತ್ಯಚಾರವೆಸಗಿದ 21 ವರ್ಷದ ಆರೋಪಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಜೋಗೇಶ್ವರಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ತನ್ನ ತಾಯಿಯ ಜೊತೆಗೆ ಮನೆಯೊಂದರಲ್ಲಿ ವಾಸವಾಗಿದ್ದಳು. ಅದೇ ಬ್ಯುಲ್ಡಿಂಗ್ ನಲ್ಲಿ ಗ್ರೌಂಡ್ ಫ್ಲೋರ್ ನಲ್ಲಿದ್ದ ಆರೋಪಿ ಯಾರೂ ಇಲ್ಲದ ಸಮಯ ನೋಡಿಕೊಂಡು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಯಾರಿಗೂ ತಿಳಿಸದಂತೆ ಧಮ್ಕಿ ಹಾಕಿದ್ದಾನೆ. ಆದ್ರೆ ಬಾಲಕಿ ಈ ಬಗ್ಗೆ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾಳೆ.
ಇತ್ತ ಮಹಿಳೆ ಓಶಿವಾರಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ದೂರು ಸಲ್ಲಿಸುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದಾನೆ.. ಬಳಿಕ ಪೊಲೀಸರು ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರ ನಡೆದಿರುವುದು ಖಚಿತವಾದ ನಂತರ ಆರೋಪಿಗಾಗಿ ಶೋಧ ನಡೆಸಿ ಆತನನ್ನ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.