ಮುಂಬೈ ಬೋಟ್ ದುರಂತದಲ್ಲಿ 13 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ. ಸತ್ತವರಲ್ಲಿ ಮೂವರು ನೌಕಾಪಡೆ ಸಿಬ್ಬಂದಿಗಳಾಗಿದ್ದಾರೆ. ಈ ವರೆಗೆ 101 ಜನರನ್ನು ರಕ್ಷಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಗೇಟ್ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ಗುಹೆಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಫೆರಿ ಬೋಟ್ಗೆ ನೌಕಾಪಡೆಯ ಸ್ಪೀಡ್ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
All The Best ಶಿವಣ್ಣ ಬೇಗ ಹುಷಾರಾಗಿ ಬನ್ನಿ ..
ಕನ್ನಡ ಚಿತ್ರರಂಗದ ಅಭಿಮಾನಿಗಳಿಗೆ ಒಂದು ಕಹಿ ಸುದ್ದಿ. 'ಕರುನಾಡ ಚಕ್ರವರ್ತಿ' ಡಾ. ಶಿವರಾಜ್ ಕುಮಾರ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಮುಂದಿನ...