ಮುಂಬೈ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ : ಸಾವಿನ ಸಂಖ್ಯೆ 9ಕ್ಕೆ ಏರಿಕೆ..!
ಮುಂಬೈ: ಮುಂಬೈನ ಆಸ್ಪತ್ರೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಸಜೀವ ದಹನವಾಗಿದ್ದಾರೆ. ಘಟನೆ ವೇಳೆ 70 ಕೊರೊನಾ ಸೋಂಕಿತರನ್ನ ಸ್ಥಳಾಂತರ ಮಾಡಲಾಗಿತ್ತು. ಇದೀಗ ೀ ಪ್ರಕರಣದಲ್ಲಿ ಸಾವನಪ್ಪಿದವರ ಸಂಖ್ಯೆ 9ಕ್ಕೇರಿದೆ.
ತಡರಾತ್ರಿ 12.30ರ ವೇಳೆಗೆ ಈ ಘಟನೆ ನಡೆದಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ 70ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಿಂದ ಸುರಕ್ಷಿತವಾಗಿ ಹೊರಬಂದಿದ್ದಾರೆ. ಆದರೆ ಇಬ್ಬರು ಮಾತ್ರ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಸಜೀವ ದಹನವಾಗಿದ್ದಾರೆ.
ಮಾಲ್ ಒಂದರಲ್ಲಿದ್ದ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 9 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಂದೂಪ್ ಪ್ರದೇಶದಲ್ಲಿರುವ ಡ್ರೀಮ್ಸ್ ಮಾಲ್ ಸನರೈಸ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು.
20 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಹಾಗೂ 15 ನೀರಿನ ಟ್ಯಾಂಕರ್ಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಆದ್ರೆ ಈ ಅವಘಡಕ್ಕೆ ಇನ್ನೂವರೆಗೂ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.
ಮಾಲ್ನ ಮೂರನೆ ಮಹಡಿಯಲ್ಲಿರುವ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ 70 ರೋಗಿಗಳನ್ನು ರಕ್ಷಿಸಿ ಬೇರೊಂದು ಆಸ್ಪತ್ರೆಗೆ ರವಾನಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಆದರೆ, ಘಟನೆಯಲ್ಲಿ 9 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಡಿ ಕೇಸ್ : ಶೀಘ್ರದಲ್ಲೇ ಸತ್ಯ ಹೊರಬರಲಿದೆ – ಬೊಮ್ಮಯಿ..!
ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಭೀಷ್ಮ ಪ್ರತಿಜ್ಞೆ ಮಾಡಿದ ಯತ್ನಾಳ್..!
ಅತ್ತೆ ನಾದಿನಿಯನ್ನ ಕೊಂದ ಈತನಿಗೆ ಸದ್ದಾಂ ಹುಸೇನ್ ಸ್ಪೂರ್ತಿಯಂತೆ..!
BIGGBOSS 8 : ದೊಡ್ಮನೆಯಲ್ಲಿ ವಿಶ್ವನ ದರ್ಬಾರ್ ಶುರು.! ಕುದುರೆ ಅಂದ್ರೆ ಅಶ್ವ… ಕ್ಯಾಪ್ಟನ್ ಅಂದ್ರೆ ವಿಶ್ವ..!