ಮುಂಬೈನಲ್ಲಿ ಧಾರಾಕಾರ ಮಳೆ – ಈವರೆಗೂ 15 ಮಂದಿ ಸಾವು
ಮಹಾರಾಷ್ಟ್ರ: ಮುಂಬೈನಲ್ಲಿ ಧಾರಾಕಾರ ಮಳೆ ಜನಜೀವನವನ್ನ ಅಸ್ತವ್ಯಸ್ತಗೊಳಿಸಿದೆ. ಶನಿವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮಹುಲ್ ಪ್ರದೇಶದ ಭಾರತ್ ನಗರದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಮನೆಗಳ ಗೋಡೆ ಕುಸಿದು 12 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಇಲ್ಲಿಯವರೆಗೂ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 15ಕ್ಕೇರಿದೆ.
ಭಾನುವಾರ ಮುಂಜಾನೆ 1 ಗಂಟೆ ಸುಮಾರಿಗೆ ಗೋಡೆ ಕುಸಿದಿದ್ದು, ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸತತ ಮಳೆಯಿಂದಾಗಿ ಮುಂಬೈನ ವಿಕ್ರೋಲಿ ಉಪನಗರದಲ್ಲಿ ಮುಂಜಾನೆ 2.30ಕ್ಕೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ 5 ಗುಡಿಸಲುಗಳು ಕುಸಿದಿದ್ದು, ಮೂವರು ನಿವಾಸಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH | Maharashtra: Rainwater entered Mumbai's Borivali east area following a heavy downpour this morning pic.twitter.com/7295IL0K5K
— ANI (@ANI) July 18, 2021
ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಎನ್‌ಡಿಆರ್‌ಎಫ್ , ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮತ್ತೊಂದೆಡೆ ಬಾರೀ ಮಳೆಯಿಂದಾಗಿ ಮುಂಬೈನ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ರೆ, ವಾಹನಗಳು ಮಳೆ ನೀರಿನಲ್ಲಿ ಕಿಒಚ್ಚಿಹೋಗುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದ್ದು, ಮುಂಬೈನ ಪರಿಸ್ಥಿತಿ ನೆಟ್ಟಿಗರನ್ನ ಬೆಚ್ಚಿಬೀಳಿಸಿದೆ.