ಪಿಕ್ನಿಕ್ ಮುಗಿಸಿ ಹಿಂತಿರುಗುವಾಗ ಬಸ್ ಪಲ್ಟಿ – ಇಬ್ಬರು ವಿದ್ಯಾರ್ಥಿಗಳ ಸಾವು..
ನಿನ್ನೆ ಭಾನುವಾರ ಸಂಜೆ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಇಬ್ಬರು ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ ಬಳಿ ನಡೆದಿದೆ.
ರಾಯಗಢ ಜಿಲ್ಲೆಯ ಖೋಪೋಲಿಯಲ್ಲಿ ಕೋಚಿಂಗ್ ತರಗತಿಯ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಮುಂಬೈನ ಚೆಂಬೂರ್‌ನಲ್ಲಿರುವ ಕೋಚಿಂಗ್ ಇನ್‌ಸ್ಟಿಟ್ಯೂಟ್ ನ 10 ನೇ ತರಗತಿಯ 48 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರನ್ನು ಹೊತ್ತ ಬಸ್ ಲೋನಾವಾಲಾದಿಂದ ಹಿಂತಿರುಗುತ್ತಿತ್ತು. ರಾತ್ರಿ 8 ಗಂಟೆ ಸುಮಾರಿಗೆ ಹಳೆ ಮುಂಬೈ-ಪುಣೆ ಹೆದ್ದಾರಿಯಲ್ಲಿ ಬೆಟ್ಟಗಳನ್ನು ಇಳಿಯುತ್ತಿದ್ದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನ ಲೋನಾವಾಲಾ, ಖೋಪೋಲಿ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿನ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
Mumbai School bus: Bus overturns while returning from picnic – 2 students killed..








