ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ವ್ಯತ್ಯಾಸವಿಲ್ಲ : ಮುನಿರತ್ನ
ಬೆಂಗಳೂರು : ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ಯಾವುದೇ ವ್ಯತ್ಯಾಸವಿಲ್ಲ. ಭಿಕ್ಷೆ ಬೇಡುವವರು ಅಮ್ಮ ಊಟ ಎನ್ನುತ್ತಾನೆ, ನಾವು ಅಮ್ಮ ಮತ ನೀಡಿ ಎನ್ನುತ್ತೇವೆ ಎಂದು ರಾಜರಾಜೇಶ್ವರಿ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ.
ಮತದಾನ ಹಿನ್ನೆಲೆ ಮುನಿರತ್ನ ಅವರು ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಾನು ಮತ ಭಿಕ್ಷೆ ಕೇಳಿದ್ದೇನೆ.
ಮತದಾರರು ಮತ ಭಿಕ್ಷೆ ನೀಡುವ ವಿಶ್ವಾಸವಿದೆ. ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ಯಾವುದೇ ವ್ಯತ್ಯಾಸವಿಲ್ಲ. ಭಿಕ್ಷೆ ಬೇಡುವವರು ಅಮ್ಮ ಊಟ ಎನ್ನುತ್ತಾನೆ, ನಾವು ಅಮ್ಮ ಮತ ನೀಡಿ ಎನ್ನುತ್ತೇವೆ ಎಂದರು.
ಕೊರೊನಾ ಸಂದರ್ಭದಲ್ಲಿ ಮತದಾನ ಮಾಡುವುದು ವಿಶೇಷ ಅನುಭವ ನೀಡಲಿದೆ. 18 ವರ್ಷದ ಯುವಕ ತನ್ನ ಮೊದಲ ಮತದಾನದಲ್ಲಿ ಭಾಗಿಯಾಗುತ್ತಿದ್ದರೆ, ಇವತ್ತಿನ ಮತದಾನ ಇತಿಹಾಸದಲ್ಲಿ ಉಳಿಯುತ್ತದೆ.
ಏಕೆಂದರೆ ಕೊರೊನಾ ಕಾರಣದಿಂದ ಚುನಾವಣಾ ಆಯೋಗ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಕೊರೊನಾಗೆ ಹೆದರಿಕೊಳ್ಳುವ ಅಗತ್ಯವಿಲ್ಲ, ಶಾಂತಿಯುತ ಮತದಾನ ನಡೆಯುತ್ತಿದೆ.
ಇದನ್ನೂ ಓದಿ : ಮಿನಿ ಸಮರ ಸೋತ್ರೆ ಡಿಕೆಶಿ ನಾಯಕತ್ವಕ್ಕೆ ಸಣ್ಣ ಮುಕ್ಕು
ಕೈಗೆ ಗ್ಲೌಸ್, ಫೇಸ್ ಮಾಸ್ಕ್ ಹಾಕಿಕೊಂಡು ಸ್ಯಾನಿಟೈಸರ್ ಬಳಕೆ ಮಾಡಿ ಕೊರೊನಾ ಸಂದರ್ಭದಲ್ಲಿ ಮತದಾನ ಮಾಡಿದ ಅನುಭವ ಜೀವನದಲ್ಲಿ ನೆನಪಿನಲ್ಲಿ ಉಳಿಯುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಕ್ಷೇತ್ರದ ಮತದಾರರು ಬುದ್ಧಿವಂತರಾಗಿದ್ದಾರೆ. ಎಲ್ಲರೂ ಖಂಡಿತ ಬಂದು ಮತ ಚಲಾಯಿಸುತ್ತಾರೆ. ಯಾರಿಗಾದರೂ ಮತ ಹಾಕಿ ಆದರೆ ಎಲ್ಲರೂ ಮತದಾನ ಮಾಡಿ ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿಕೊಂಡರು.
ನಾನು ಮಲ್ಲೇಶ್ವರಂ ನಿವಾಸಿಯಾಗಿದ್ದು, ನನಗೆ ಆರ್.ಆರ್ ನಗರದಲ್ಲಿ ಮತದಾನದ ಅವಕಾಶವಿಲ್ಲ. ಆದ್ದರಿಂದ ಮನೆಯಲ್ಲಿ ಇರುತ್ತೇನೆ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದು, ಜನರ ತೀರ್ಪು ಅಂತಿಮವಾಗಿದೆ.
ಚುನಾವಣೆ ಸಂದರ್ಭದಲ್ಲಿ ಮಾಡಿದ ಆರೋಪಿಗಳಿಗೆ ನಾನು ಫಲಿತಾಂಶದ ದಿನ ಉತ್ತರ ಕೊಡುತ್ತೇನೆ. ಆರೋಪ ಮಾಡಿದವರು ತಿರುಪತಿಗೆ ಅಲ್ಲ, ಈ ಭೂಲೋಕದ ಯಾವುದೇ ದೇವಸ್ಥಾನಕ್ಕೆ ಕರೆದರೂ ನಾನು ಬರಲು ಸಿದ್ಧನಾಗಿದ್ದೇನೆ.
ಅವರು ಸಿದ್ಧರಾಗಿ ಇರಲಿ. ಚುನಾವಣೆ ಸಂದರ್ಭದಲ್ಲಿ ಆರೋಪ ಮಾಡುವುದು ದೊಡ್ಡ ವಿಚಾರವಿಲ್ಲ ಎಂದು ಸವಾಲ್ ಎಸೆದಿದ್ದಾರೆ. ನನ್ನ ಮೇಲಿನ ಆರೋಪಗಳಿಗೆ ನಾನು ಉತ್ತರ ಕೊಡಲು ಸಿದ್ಧವಾಗಿದ್ದು, ಚುನಾವಣಾ ಆಯೋಗ ಅನುಮತಿ ಪಡೆದು ಪ್ರತಿಕಾಗೋಷ್ಠಿ ನಡೆಸುತ್ತೇನೆ. ಅಲ್ಲದೇ ನಾನು ಜಂಟಿ ಸುದ್ದಿಗೋಷ್ಠಿ ನಡೆಸಲು ಕೂಡ ಸಿದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ : ಬಿಜೆಪಿ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆಯಲ್ಲಿದೆ : ಟಿ.ಬಿ.ಜಯಚಂದ್ರ
ಆರ್. ಆರ್. ನಗರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ವಿ ಕೃಷ್ಣಮೂರ್ತಿ, ಕಾಂಗ್ರೆಸ್ನಿಂದ ಹೆಚ್. ಕುಸುಮಾ, ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಗಳಾಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವನ್ನು ನೀಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel