ಬೆಂಗಳೂರು : ರಾಜರಾಜೇಶ್ವರಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ನಾಳೆ ಬೆಳಗ್ಗೆ 11ಗಂಟೆಗೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ (Muniratna nomination) ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಹಕಾರ ಖಾತೆಯ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ9.30ಕ್ಕೆ ಮುನಿರತ್ನ (Muniratna nomination) ಅವರನ್ನು ಪಕ್ಷದ ಕಚೇರಿಗೆ ಬರಲು ಹೇಳಿದ್ದಾರೆ. 11 ಗಂಟೆಗೆ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ.
ಸಿಎಂ ಯಡಿಯೂರಪ್ಪನವರೇ ಈ ಬಗ್ಗೆ ಅಧಿಕೃತವಾಗಿ ತಿಳಿಸುತ್ತಾರೆ. ಅಭ್ಯರ್ಥಿ ವಿಚಾರವಾಗಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.
ಇದನ್ನೂ ಓದಿ : ಆರ್ ಆರ್ ನಗರ ಬೈ ಎಲೆಕ್ಷನ್ : ವಿ ಕೃಷ್ಣಮೂರ್ತಿ ಜೆಡಿಎಸ್ ಅಭ್ಯರ್ಥಿ
ಈ ವಿಚಾರದ ಬಗ್ಗೆ ಮುನಿರತ್ನ ಮಾತನಾಡಿ, ಎಸ್.ಟಿ.ಸೋಮಶೇಖರ್ ಹೇಳಿಕೆಯ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮ.
ಪಕ್ಷದಿಂದ ನನಗೆ ಯಾವುದೇ ಮಾಹಿತಿ ಇಲ್ಲ. ಸೋಮಶೇಖರ್ ಹೇಳಿಕೆ ಬಗ್ಗೆ ಅವರ ಜತೆಯೇ ಮಾತಾಡುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ : 11 ರಾಜ್ಯಸಭಾ ಸ್ಥಾನಗಳಿಗೆ ನ.9 ರಂದು ಚುನಾವಣೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel