ಕೊರೊನಾ ವೈರಸ್ ವಿರುದ್ಧ ಹೋರಾಡಲು ಮಾಜಿ ಕೇಂದ್ರ ಸಚಿವ ಕೆ.ಹೆಚ್ ಮುನಿಯಪ್ಪ ತಮ್ಮ ಪ್ರತಿ ತಿಂಗಳ ಪಿಂಚಣಿಯ ಶೇ.30 ಭಾಗವನ್ನು ಕೋವಿಡ್ 19 ಪರಿಹಾರ ನಿಧಿಗೆ ಸಲ್ಲಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ತಮ್ಮ ಒಪ್ಪಿಗೆ ಪತ್ರವನ್ನು ಸಲ್ಲಿಸಿದ್ದಾರೆ. ದೇಶದಲ್ಲಿಯೇ ಹೀಗೆ ಮಾಜಿ ಸಚಿವ ಹಾಗೂ ಸಂಸದರೊಬ್ಬರು ತಮಗೆ ಬರುತ್ತಿರುವ ಪಿಂಚಣಿಯನ್ನು ಸಿಎಂ ಅಥವಾ ಪಿಎಂ ಪರಿಹಾರ ನಿಧಿಗೆ ಸಲ್ಲಿಸಿರುವುದು ಇದೇ ಮೊದಲು ಎನ್ನಲಾಗಿದೆ.
ಬಳಿಕ ಮಾತನಾಡಿದ ಮುನಿಯಪ್ಪ, ಕರ್ನಾಟಕ ರಾಜ್ಯ ಸರಕಾರವು ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಬಡ ಕುಟುಂಬಗಳಿಗೆ ಪಡಿತರ ವ್ಯವಸ್ಥೆ ಮೂಲಕ ಆಹಾರ ಪದಾರ್ಥಗಳನ್ನು ವಿತರಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ರಾಜ್ಯ ಸರಕಾರ ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಯಲು ಸರ್ವ ಪಕ್ಷಗಳೊಂದಿಗೆ ಸಮನ್ವಯತೆ ಸಾಧಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಶಾಸಕ ಕೆ.ವೈ.ನಂಜೇಗೌಡ, ರೂಪಕಲಾ ಶಶಿಧರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಖಜಾಂಚಿ ರಾಮಪ್ರಸಾದ್, ಉಪಾಧ್ಯಕ್ಷ ಎಲ್.ಎ.ಮಂಜುನಾಥ್, ಕಾರ್ಯದರ್ಶಿ ಕುಮಾರ್, ಜಿಲ್ಲಾ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್ ಇತರರು ಹಾಜರಿದ್ದರು.
ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ
ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...








