ಇವರಿಗೆ ಯಾವುದೇ ಕಾರಣಕ್ಕೂ ವಿಧಾನ ಪರಿಷತ್ ಟಿಕೆಟ್ ಇಲ್ಲ, ಇದು ಕಾರ್ಯಕರ್ತರ ಪಕ್ಷ : ಬಿಜೆಪಿ
ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸುವ ಕಾರ್ಯದಲ್ಲಿ ಭಾಗಿಯಾಗಿದ್ದ, ಅನರ್ಹ ಶಾಸಕ ಮುನ್ನಿರತ್ನ ಮತ್ತು ಪ್ರತಾಪ್ ಗೌಡ ಪಾಟೀಲ್ ನಮಗೂ ವಿಧಾನಪರಿಷತ್ ಟಿಕೆಟ್ ನೀಡಬೇಕು ಎಂದು ಬಿಜೆಪಿ ರಾಜ್ಯ ನಾಯಕರಿಗೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.
ಚುನಾವಣಾ ಪ್ರಕರಣಗಳು ನ್ಯಾಯಲಯದಲ್ಲಿ ಈವರೆಗೂ ಇತ್ಯರ್ಥಗೊಂಡಿಲ್ಲ. ಅಲ್ಲಿ ವಿಳಂಬವಾಗುತ್ತದೆ. ಹಾಗಾಗಿ ನಮಗೆ ವಿಧಾನಪರಿಷತ್ ಟಿಕೆಟ್ ನೀಡಬೇಕು ಎಂದು ಮುನ್ನಿರತ್ನ ಹಾಗೂ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಮೇಲೆ ಒತ್ತಡ ಹಾಕುತ್ತಿದ್ದಾರೆ. ರಾಜಿನಾಮೇ ನೀಡಿ ವರ್ಷವೇ ಕಳೆದಿದೆ. ನ್ಯಾಯಲಯದಲ್ಲಿ ಪ್ರಕರಣಗಳು ಇತ್ಯರ್ಥಗೊಳ್ಳುತ್ತಿಲ್ಲ. ಜೊತೆಗೆ ಉಪಚುನಾವಣೆ ನಡೆಯುತ್ತಿಲ್ಲ. ಹಾಗಾಗಿ ಅವಕಾಶ ನೀಡಬೇಕು ಎಂದ ಕೇಳಿದ್ದಾರೆ ಎನ್ನಲಾಗಿದೆ.
ಆದರೆ ಅನರ್ಹ ಶಾಸಕ ಮುನ್ನಿರತ್ನ ಮತ್ತು ಪ್ರತಾಪ್ ಗೌಡ ಪಾಟೀಲ್ ಅವರ ಬೇಡಿಕೆಯನ್ನು ಬಿಜೆಪಿ ಕೋರ್ ಕಮಿಟಿ ತಳ್ಳಿಹಾಕಿದೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಪ್ರಸ್ತಾಪವಾಗಿದೆ. ಜೊತೆ ಚರ್ಚೆ ನಡೆದಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಾಲಿಗೆ 4 ಸ್ಥಾನಗಳಿವೆ. ಆ 4 ಸ್ಥಾನಗಳಿಗೂ ಸಾಕಷ್ಟು ಪೈಪೋಟಿಯಿದೆ.
ಆದ್ದರಿಂದ ಪ್ರತಾಪ್ ಗೌಡ ಪಾಟೀಲ್ ಮತ್ತು ಮುನ್ನಿರತ್ ಅವರು ಉಪಚುನಾವಣೆ ಎದುರಿಸಲಿ. ವಿಧಾನ ಪರಿಷತ್ ಟಿಕೆಟ್ ನೀಡಲು ಆಗುವುದಿಲ್ಲ. ಜೊತೆಗೆ 5 ಸ್ಥಾನಗಳನ್ನು ನಾಮ ನಿರ್ದೇಶನ ಮಾಡಬೇಕಿದೆ. ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವುದಾಗಿದೆ ಕಾರ್ಯಕರ್ತರಿಗೆ ಭರವಸೆ ನೀಡಲಾಗಿತ್ತು. ಆದರೆ 4 ಸ್ಥಾನಗಳನ್ನು ಸರ್ಕಾರದ ರಚನೆ ಕಾರಣರಾದವರಿಗೆ ನೀಡಬೇಕಿದೆ. ಆದ್ದರಿಂದ ನಾಮ ನಿರ್ದೇಶನದಲ್ಲಿ ಪಕ್ಷದ ನಿಷ್ಠವಂತ ಕಾರ್ಯಕರ್ತರಿಗೆ ಒತ್ತು ನೀಡಬೇಕು ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಿದೆ.
ಪಕ್ಷದ ನಿಷ್ಠವಂತ ಕಾರ್ಯಕರ್ತರನ್ನು ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ಬಿಜೆಪಿ ತೀರ್ಮಾನ ಮಾಡಿದೆ. ಆ ಮೂಲಕ ಬಿಜೆಪಿ ಕಾರ್ಯಕರ್ತರ ಪಕ್ಷ ಎಂದು ಬಿಜೆಪಿ ಬಿಂಬಿಸಲು ಪ್ರಯತ್ನ ನಡೆಸುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿವೆ.








