ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚೆಗೆ ಈ ಕುರಿತು ಮಾಹಿತಿ ನೀಡಿದೆ.
2021 ರಲ್ಲಿ 1,357 ಕೊಲೆ ಪ್ರಕರಣಗಳು ದಾಖಲಾಗಿದ್ದವು. ರಾಜ್ಯದಲ್ಲಿ 2022ರಲ್ಲಿ 1,404 ಕೊಲೆ ಪ್ರಕರಣಗಳು ದಾಖಲಾಗಿವೆ. ದ್ವೇಷ ಹಾಗೂ ವೈಷಮ್ಯದ ವಿವಾದವೇ ಹೆಚ್ಚಿನ ಕೊಲೆಗೆ ಕಾರಣ ಎನ್ನಲಾಗಿದೆ.
ಉತ್ತರ ಪ್ರದೇಶದಲ್ಲಿ ಗರಿಷ್ಠ 3,491 ಕೊಲೆ ಪ್ರಕರಣಗಳು ದಾಖಲಾಗಿದ್ದು, ಆನಂತರದ ಸ್ಥಾನಗಳಲ್ಲಿ ಬಿಹಾರದಲ್ಲಿ 2,930, ಮಹಾರಾಷ್ಟ್ರದಲ್ಲಿ 2,295 ಕೊಲೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ರಾಜ್ಯವು 8ನೇ ಸ್ಥಾನ ಗಳಿಸಿದೆ. ರಾಜ್ಯದಲ್ಲಿ ಲಕ್ಷಕ್ಕೆ 2.1ರಷ್ಟು ಕೊಲೆ ಪ್ರಕರಣ ದಾಖಲಾಗಿವೆ ಎನ್ನಲಾಗಿದೆ.