ಚಾಮರಾಜನಗರ : ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ತಲೆ ಹಿಂಭಾಗಕ್ಕೆ ಬಲವಾಗಿ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮಹದೇಶ್ವರ ಬೆಟ್ಟದ ಸಮೀಪ ತಾಳಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟ ಗ್ರಾಮದ ಮಹದೇವ ಪ್ರಸಾದ್ ಅಲಿಯಸ್ ಪುನೀತ್ (28) ಮೃತ ವ್ಯಕ್ತಿಯಾಗಿದ್ದಾರೆ.
ಈತ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿಯಲ್ಲಿ ನೀರು ಗಂಟ್ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅನಿವಾರ್ಯ ಕೆಲಸ ನಿಮಿತ್ತಾ ಹನೂರು ಕಡೆ ಬೈಕ್ ನಲ್ಲಿ ತೆರಳಿದ್ದರು. ಈ ವೇಳೆ ತಾಳ ಬೆಟ್ಟದ ಮುಖ್ಯರಸ್ತೆಯಲ್ಲಿ ದುರ್ಷ್ಕಮಿಗಳು ಈತನ ತಲೆಗೆ ಹೊಡೆದು ಕೊಲೆ ಮಾಡಿ ಬೈಕ್ ಮೇಲೆ ಮಲಗಿಸಿ ಪರಾರಿ ಆಗಿದ್ದಾರೆ.
ಸುದ್ದಿ ತಿಳಿದು ಮಹದೇಶ್ವರ ಬೆಟ್ಟದ ಪಿಎಸ್ ಐ ಮಹೇಶ್ ಮತ್ತು ಸಿಬ್ಬಂದಿ ವರ್ಗ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಹನೂರು ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. 
ಇನ್ನು ಶಾಸಕ ಆರ್. ನರೇಂದ್ರ ಅವರು ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತ ಕುಟುಂಸ್ಥರಿಗೆ ಸಾಂತ್ವಾನ ಹೇಳಿದರು. ಹಾಗೂ ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.








