ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ
ರಾಮನಗರ : ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕನಕಪುರ ತಾಲೂಕಿನ ತೇರಿನದೊಡ್ಡಿಯಲ್ಲಿ ನಡೆದಿದೆ.
26 ವರ್ಷದ ಜಗದೀಶ್ ಕೊಲೆಯಾದ ಯುವಕನಾಗಿದ್ದು, ಈಗ ಕನಕಪುರ ತಾಲೂಕಿನ ತೇರಿನದೊಡ್ಡಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಈ ವೇಳೆ ಜಗದೀಶ್ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಇದರೊಂದಿಗೆ ಸ್ಥಳದಲ್ಲಿಯೇ ಜಗದೀಶ್ ಪ್ರಾಣ ಬಿಟ್ಟಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆ ಆರೋಪಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಇನ್ನು ಈ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ನಡೆಯುತ್ತಿದೆ.









