ದೇವನಹಳ್ಳಿ: ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದು ಪ್ರಿಯತಮೆಯನ್ನು (lover) ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ಮೂಲದ ಹೇಮಾವತಿ(35) ಸಾವನ್ನಪ್ಪಿದ ಮಹಿಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಎಂಬಾತ ಈ ಕೃತ್ಯ ಎಸಗಿದ್ದಾನೆ. ಈ ಘಟನೆ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
4 ತಿಂಗಳ ಹಿಂದೆ ಹೊಸಕೋಟೆಯಲ್ಲಿ ವೇಣು ಬಾಡಿಗೆ ಮನೆಮಾಡಿ ಹೇಮಾವತಿಯನ್ನು ಇರಿಸಿದ್ದ. ಯುವತಿ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದಳು. ಆಗಾಗ ವೇಣು ಹೇಮಾವತಿ ಮನೆಗೆ ಬಂದು ಹೋಗುತ್ತಿದ್ದ. ಭಾನುವಾರ ಮನೆಗೆ ಬಂದಿದ್ದ ವೇಣು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಅಲ್ಲದೇ, ಮನೆಗೆ ಹೋಗಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥ ವೇಣುನನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.