ಉಡುಪಿ: ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ (Udupi 4 Murder) ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಪ್ರವೀಣ್ ಚೌಗಲೆ ಎಂಬಾತನನ್ನೇ ಪೊಲೀಸರು ಬಂಧಿಸಿದ್ದಾರೆ. ಈತ ಉಡುಪಿಯಿಂದ ತಲೆ ಮರೆಸಿಕೊಂಡು ಕುಡಚಿಯ ಸಂಬಂಧಿ ಮನೆಯಲ್ಲಿ ಆಶ್ರಯ ಪಡೆದಿದ್ದ ಎನ್ನಲಾಗಿದೆ. ರೋಪಿ ಈ ಹಿಂದೆ ಪೊಲೀಸ್ ಆಗಿ ಕೆಲಸ ಮಾಡಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಅಜ್ಞಾತ ಸ್ಥಳದಲ್ಲಿ ಆರೋಪಿ ಪ್ರವೀಣ್ ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಆರೋಪಿಯು ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದಾನೆ. ಈತ ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸ್ ಆಗಿ ಕೆಲಸ ಮಾಡಿದ್ದ. ಆದರೆ, ಮೂರೇ ತಿಂಗಳಲ್ಲಿ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ. ಹೀಗಾಗಿ ಕಳೆದ 10 ವರ್ಷಗಳಿಂದ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ಮಂಗಳೂರು ಏರ್ ಪೋರ್ಟ್ ನಲ್ಲಿ ಏರ್ ಇಂಡಿಯಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಯ್ನಾಜ್ ನ ಸಹೋದ್ಯೋಗಿಯಾಗಿದ್ದ. ಸದ್ಯ ಈ ಅಯ್ನಾಜ್ ಕೊಲೆಯಾದವರು. ಈತ ಉಡುಪಿಗೆ ಬಂದು. ಅಯ್ನಾಜ್ ಮನೆಯಲ್ಲಿ ರೆಸ್ಟ್ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕೊಲೆ ಮಾಡಿದ್ದಾನೆ.