Murder of SSLC student-ಬೆಳಗಾವಿ: ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ಮಾರಕಾಸ್ತ್ರದಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿಹಾಕಿ SSLC ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರು ಘಟನೆ ಬೇಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿಯನ್ನು ಪ್ರಜ್ವಲ್ ಶಿವಾನಂದ ಕರಿಗಾರ(16) ಎಂದು ಗುರುತಿಸಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಅರೆ ಬೆತ್ತಲೆ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ದೊರೆತಿದ್ದು , ಶಾಲಾ ಸಮವಸ್ತ್ರದಿಂದ ವಿದ್ಯಾರ್ಥಿಯನ್ನು ಪತ್ತೆಮಾಡಲಾಗಿದ್ದು ಬೆಳಗಾವಿಯ ಖಾಸಗಿ ಶಾಲೆಯೊಂದರಲ್ಲಿ ಪ್ರಜ್ವಲ್ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಈ ಹಿಂದೆ ಕ್ಯಾಂಪ್ ಠಾಣೆಯಲ್ಲಿ ಪ್ರಜ್ವಲ್ ಕಾಣೆಯಾದ ಪ್ರಕರಣ ದಾಖಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಡಿಸಿಪಿ ರವೀಂದ್ರ ಗಡಾದಿ ಮತ್ತು ಎಸಿಪಿ ಗಿರೀಶ್ ಪ್ರಕರಣ ಕುರಿತು ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು,ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.