ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತುಳು ಚಿತ್ರ ನಟ ಸುರೇಂದ್ರ ಬಂಟ್ವಾಳ್‍ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೆಲ ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್‍ನನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಆತನ ಫ್ಲಾಟ್ ನಲ್ಲೇ ಕೊಲೆ ಮಾಡಲಾಗಿದೆ.
ರೌಡಿಶೀಟರ್ ಆಗಿದ್ದ ಸುರೇಂದ್ರ ಬಂಟ್ವಾಳ್‍ನನ್ನು ಹಣಕಾಸು ವಿಚಾರಕ್ಕೆ ಜೊತೆಗಿದ್ದವರಿಂದಲೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ರಾತ್ರಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂದು ಮಧ್ಯಾಹ್ನ ಆದರೂ ಸುರೇಂದ್ರ ಮನೆಯಿಂದ ಹೊರಗೆ ಬಾರದಿದ್ದಾಗ ಪರಿಶೀಲಿಸಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಚಾಲಿ ಪೋಲಿಲು ಸಿನಿಮಾ ಸಿನಿಮಾದಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಪಾತ್ರದಲ್ಲಿ ನಟಿಸಿ ಸುರೇಂದ್ರ ತುಳುನಾಡಿನಲ್ಲಿ ಮನೆ ಮಾತಾಗಿದ್ದ. `ಸವರ್ಣಧೀರ್ಘ ಸಂಧಿ’ ಕನ್ನಡ ಚಿತ್ರ ಸೇರಿ ಹಲವು ತುಳು ಚಿತ್ರಗಳಲ್ಲಿ ನಟನೆ ಮಾಡಿದ್ದ ಸುರೇಂದ್ರ, 2018ರ ಜೂನ್‍ನಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. ಬಂಟ್ವಾಳ ಪೇಟೆಯಲ್ಲಿ ತಲ್ವಾರ್ ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದ ಬಂಟ್ವಾಳ್‍ನ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಸುರೇಂದ್ರ ಬಂಟ್ವಾಳ್ ಹೊರಬಂದಿದ್ದ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel