ಎಣ್ಣೆ ಪಾರ್ಟಿಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

1 min read
WIFE KILLS

ಎಣ್ಣೆ ಪಾರ್ಟಿಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ murder

ಮಂಡ್ಯ : ಎಣ್ಣೆ ಪಾರ್ಟಿಯಲ್ಲಿ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಹಳ್ಳಿಯಲ್ಲಿ ನಡೆದಿದೆ.

30 ವರ್ಷದ ಕುಮಾರ್ ಮೃತ ಯುವಕನಾಗಿದ್ದು, ಮಹದೇವು ಎಂಬ ಸ್ನೇಹಿತ ಕುಮಾರ್‍ನನ್ನು ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.

murder

ಈ ಇಬ್ಬರು ನಿನ್ನೆ ರಾತ್ರಿ ಮಹದೇವು ಮನೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾವುದೋ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಶುರುವಾಗಿದೆ.

ಈ ವೇಳೆ ಇಬ್ಬರ ನಡುವಿನ ಜಗಳ ತಾರಕಕ್ಕೆ ಏರುತ್ತದೆ. ನಂತರ ಮಹದೇವು ಕುಮಾರ್‍ಗೆ ಬಾಟಲಿ ಹಾಗೂ ರಾಡಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd