ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಮೂಡಬಿದರೆ ಪೊಲೀಸರು ಬಂಧಿಸಿದ್ದಾರೆ.
ಡಿಸಿ ಸಿಂಧೂ ರೂಪೇಶ್ ಅವರನ್ನು ಕೊಲೆ ಮಾಡಬೇಕು ಎಂಬ ಅರ್ಥದಲ್ಲಿ ರಾಮಸೇನಾ ಎಂಬ ವಾಟ್ಸ್‍ಆಪ್ ಗ್ರೂಪ್‍ನಲ್ಲಿ ತುಳು ಭಾಷೆಯಲ್ಲಿ ಬೆದರಿಕೆ ಹಾಕಲಾಗಿತ್ತು.
ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಮೂಡಬಿದರೆ ಪೊಲೀಸರು, ಬೆದರಿಕೆ ಹಾಕಿದ್ದ ಆರೋಪಿ ರಂಜಿತ್‍ನನ್ನು ಬಂಧಿಸಿದ್ದಾರೆ.
ಗೋ ಸಾಗಾಟ ನಡೆಸುವವರ ಮೇಲೆ ಹಲ್ಲೆ ನಡೆಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆ ನೀಡಿದ್ದರು. ಈ ಕಾರಣಕ್ಕೆ ಕೊಲೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.
ಡಿಸಿಗೆ ಕೊಲೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಜಿಲ್ಲೆಯಲ್ಲಿ ಬಂದಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಇದು ಕೂಡ ಸ್ಥಳೀಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








