ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿಗಳ ಕಚೇರಿಗೆ ಯತ್ನಾಳ್ ಬೆಂಬಲಿಗ ರಾಘವ ಅನ್ನಿಗೇರಿ ಎಂಬುವವರು ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಶುಕ್ರವಾರ ವಿಜಯಪುರ ಗೋಲಗುಮ್ಮಟ ಪೊಲೀಸ್ ಠಾಣೆ ಎದುರು ರಘು ಕಣಮೇಶ್ವರ ಎಂಬಾತ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಶಾಸಕರಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ ರಘು ಕಣಮೇಶ್ವರ ವಿರುದ್ಧ ಎಸ್ ಪಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಸೂಚಿಸುವಂತೆ ಪ್ರಧಾನಮಂತ್ರಿಗಳಿಗೆ ರಘು ಕಣಮೇಶ್ವರ ಮನವಿ ಮಾಡಿಕೊಂಡಿದ್ದಾರೆ. ಮೇಲ್ ಮೂಲಕ ಪ್ರಧಾನಿಗಳ ಕಚೇರಿಗೆ ದೂರು ರವಾನೆಯಾಗಿದೆ. ದೂರು ರಿಜಿಸ್ಟರ್ ಮಾಡಿಕೊಳ್ಳಲಾಗಿದೆ ಎಂದು ಪಿಎಂ ಕಚೇರಿಯಿಂದಲೂ ರಾಘವ್ ಅವರಿಗೆ ರಿಟರ್ನ್ ಮೇಲ್ ಬಂದಿದೆ. ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಹಿಂದೆ ಯಾರಿದ್ದಾರೆ ಅನ್ನೋ ಬಗ್ಗೆ ತನಿಖೆ ನಡೆಸಬೇಕು ಎಂದು ರಾಘವ ಅನ್ನಿಗೇರಿ ಕೇಳಿಕೊಂಡಿದ್ದಾರೆ.








