Muruga Shree Arrest | ಮುರುಘಾ ಶರಣರ ಬಂಧನ : ಮಠದ ಆವರಣ ಖಾಲಿ ಖಾಲಿ
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಶರಣರು ಜೈಲು ಸೇರಿದ್ದು, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಇದೀಗ ಮಠದ ಆವರಣ ಜನರಿಲ್ಲದೇ ಖಾಲಿ ಖಾಲಿಯಾಗಿದೆ.
ಮುನ್ನಚ್ಚರಿಕಾ ಕ್ರಮವಾಗಿ ಪೊಲೀಸರು ಮಠದ ಸುತ್ತಮುತ್ತ ಬ್ಯಾರಿಕೇಡ್ ಗಳನ್ನು ಹಾಕಿದ್ದಾರೆ.
ಬ್ಯಾಕ್ ಗೇಟ್, ಫ್ರಂಟ್ ಗೇಟ್ ಕೂಡ ಬಂದ್ ಮಾಡಲಾಗಿದೆ.
ಕೇವಲ ಮಠದ ಸಿಬ್ಬಂದಿಕೆ ಮಾತ್ರ ಮಠದ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.
ಅಂದಹಾಗೆ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಸಂಬಂಧ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ರು.
ನಂತರ ಅವರನ್ನ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು.
ಬಳಿಕ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಿದ್ರು.
ಈ ವೇಳೆ ಶರಣರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.