ನವದೆಹಲಿ: ಪೋಕ್ಸೋ ಕಾಯ್ದೆಯಡಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಶ್ರೀಗೆ ಕೋರ್ಟ್ ಮತ್ತೆ ನಾಲ್ಕು ತಿಂಗಳುಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇಂದು ವಿಚಾರಣೆ ನಡೆಸಿದ ಕೋರ್ಟ್ ಮತ್ತೆ ನಾಲ್ಕು ತಿಂಗಳ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಹೀಗಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ಪುನಃ ಜೈಲಿಗೆ ಕಳುಹಿಸುವಂತೆ ಆದೇಶ ನೀಡಿದೆ. ವಿಶೇಷ ನ್ಯಾಯಾಲಯದಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆ ನಡೆಯುತ್ತಿದೆ. ನಾಲ್ಕು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಇಲ್ಲವಾದರೆ, ಶ್ರೀ ಮತ್ತೆ ಜೈಲಿನಲ್ಲಿಯೇ ಉಳಿಯಬೇಕಾಗಬಹುದು.