ಚಿತ್ರದುರ್ಗ: ಬಾಡಿ ವಾರಂಟ್ ಮುರುಘಾಶ್ರೀಯನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆಯ ಎಡಿಜಿಪಿ ಅವರಿಗೆ ತನಿಖೆ ನಡೆಸಲು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಆದೇಶಿಸಿದೆ.
ಜಿಲ್ಲಾ ಕಾರಾಗೃಹದ ಜೈಲರ್ ಆಗಿರುವ ಶ್ರೀಮಂತ್ ಗೌಡ ಪಾಟೀಲ್ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ. ಮುರುಘಾಶ್ರೀ ವಿರುದ್ಧದ 1ನೇ ಫೋಕ್ಸೋ ಕೇಸ್ನಲ್ಲಿ ಜಾಮೀನು ಹಿನ್ನಲೆಯಲ್ಲಿ ಹೈಕೋರ್ಟ್ ಆದೇಶದನ್ವಯ ಬಿಡುಗಡೆಗೆ ಸೂಚನೆ ನೀಡಲಾಗಿತ್ತು. ಆದರೆ, 2ನೇ ಫೋಕ್ಸೋ ಪ್ರಕರಣದಲ್ಲಿ ಬಾಡಿ ವಾರೆಂಟ್ ಹಿನ್ನೆಲೆ ಬಂಧನ ವಾರೆಂಟ್ಗೆ ಸರ್ಕಾರಿ ವಕೀಲ ಜಗದೀಶ್ ಮನವಿ ಮಾಡಿದ್ದರು. ಈ ಕುರಿತು ಸರ್ಕಾರಿ ವಕೀಲ ಜಗದೀಶ್ ಪ್ರಶ್ನಿಸಿರುವ ಬೆನ್ನಲ್ಲಿಯೇ ಕಾರಾಗೃಹ ಇಲಾಖೆಗೆ ತನಿಖೆ ನಡೆಸಿ ವರದಿ ನೀಡಲು 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ಆದೇಶ ನೀಡಿದ್ದಾರೆ.