Murugesh Nirani | ಸಿಎಂ ಬದಲಾವಣೆ ಬಗ್ಗೆ ನಿರಾಣಿ ಸ್ಪಷ್ಟನೆ Murugesh-nirani-clarifies about CM change saaksha tv
ಮೈಸೂರು: ಸಚಿವ ಸಂಪುಟ ವಿಸ್ತರಣೆ ಸಿಎಂ ಬಸವರಾಜ ಬೊಮ್ಮಯಿ ಯವರ ಪರಮಾಧಿಕಾರ. ಅದರಲ್ಲಿ ನಮ್ಮ ಪಾತ್ರಗಳು ಏನು ಇಲ್ಲ ಎಂದು ಸಚಿವ ಮುಗುಗೇಶ್ ನಿರಾಣಿ ಹೇಳಿದ್ದಾರೆ.
ರಾಜ್ಯದಲ್ಲಿ ಕೆಲ ದಿನಗಳಿಂದ ಸಿಎಂ ಬದಲಾವಣೆ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ನಿರಾಣಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಬೊಮ್ಮಯಿ ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ. ರಾಷ್ಟ್ರೀಯ ನಾಯಕರು ಬದಲಾವಣೆ ಸಿಎಂ ಬದಲಾವಣೆ ಇಲ್ಲ ಎಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ 130 ಸೀಟ್ ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಮೂರನೇ ಪೀಠದ ಸ್ಥಾಪನೆ ವಿವಾದದ ಕುರಿತು ಮಾತನಾಡಿದ ಅವರು, ಈ ಬಗ್ಗೆ ನಾನೇ ಖುದ್ದಾಗಿ ಸ್ವಾಮೀಜಿಯನ್ನು ಭೇಟಿ ಮಾಡುವುದಿಲ್ಲ. ಅವರು ಕರೆದರೆ ನಾನು ಹೋಗಿ ಮಾತನಾಡುತ್ತೇನೆ ಎಂದರು.
ಮಠಕ್ಕೆ ಕೊಟ್ಟಿರುವ ಕಾಣಿಕೆ ವಾಪಸ್ಸು ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನಾನು ಕಾಣಿಕೆಯನ್ನು ಸ್ವಾಮೀಜಿಗೆ ಕೊಟ್ಟಿಲ್ಲ. ನಾನು ಕೊಟ್ಟಿರುವುದು ಪೀಠಕ್ಕೆ. ಕೊಟ್ಟಿರುವುದುನ್ನು ವಾಪಸ್ಸು ಕೇಳುವಷ್ಟು ಸಣ್ಣವನು ನಾನಲ್ಲ. ಇಂತಹ ಮನಸ್ಥಿತಿ ನನಗೆ ಇಲ್ಲ. ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು. ಅದೇ ರೀತಿ ನಾನು ಪೀಠಕ್ಕೆ ನನ್ನ ಕೈಲಾದದನ್ನು ನೀಡಿದ್ದೇನೆ. ನಾನು ವಾಪಸ್ಸು ಕೇಳಿದ್ದೇನೆ ಎಂಬುದು ಸುಳ್ಳು. ಸ್ವಾಮೀಜಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ದೂರವಾಣಿ ಮೂಲಕ ಮಾತನಾಡಿದರೂ ನಾನು ಸ್ಪಷ್ಟನೆ ನೀಡುತ್ತೇನೆ ಎಂದಿದ್ದಾರೆ.