ರಾಜ್ಯದಲ್ಲಿ ಕೊರೊನಾ ಆತಂಕದ ನಡುವೆಯೂ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ವಿಚಾರವಾಗಿ ಶಾಸಕ ಮುರುಗೇಶ್ ನಿರಾಣಿ ಅವರು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾನು ಯಾವ ಸಂಪುಟ ವಿಸ್ತರಣೆ ಬಗ್ಗೆಯೂ ತಲೆ ಕೆಡಿಸಿಕೊಂಡಿಲ್ಲ ಎಂದಿದ್ದಾರೆ. ಅಲ್ಲದೇ ನನಗೆ ಸಚಿವ ಸ್ಥಾನ ಕೊಟ್ಟರೂ ಬಿಜೆಪಿಯಲ್ಲೇ ಇರ್ತೀನಿ. ಕೊಡದಿದ್ದರೂ ಬಿಜೆಪಿಯಲ್ಲೇ ಇರ್ತೀನಿ. ನಾನು ಸಚಿವನಾಗಿ ಪಿಎಸ್‌ಎಸ್‌ಕೆ ಗುತ್ತಿಗೆ ಪಡೆದಿದ್ದರೆ ಬೇರೆ ಅರ್ಥ ಕಲ್ಪಿಸುತ್ತಿದ್ದರು ಎಂದಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ನಡೆದ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕರು ನನಗೆ ಸಿಎಂ ಬದಲಾವಣೆ ವಿಚಾರವೇ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.









