Murugesh Nirani | ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ

1 min read
Murugesh Nirani There is no CM change in the Karnataka saaksha tv

Murugesh Nirani There is no CM change in the Karnataka saaksha tv

Murugesh Nirani | ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ

ತುಮಕೂರು :  ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗೇಶ್ ನಿರಾಣಿ,  ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಬಸವರಾಜ ಬೊಮ್ಮಾಯಿ ಒಳ್ಳೇ ಸರ್ಕಾರ ಒಳ್ಳೇ ಆಡಳಿತ ಕೊಡುತ್ತಿದ್ದಾರೆ. ಸಚಿವ ಸಂಪುಟದ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಅವರು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಇದೇ ವೇಳೆ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಮಾತನಾಡಿದ ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅದರ ಕುರಿತು ಅಧ್ಯಯನ ಮಾಡುತ್ತಿದ್ದಾರೆ.

ಇನ್ನೂ ಎರಡು ತಿಂಗಳಲ್ಲಿ ವರದಿ ತಯಾರಾಗಬಹುದು. ಆಗ ಸೂಕ್ತ ನಿರ್ಧಾರಕ್ಕೆ ಬರುತ್ತೇವೆ  ಎಂದು ಸಿಎಂ ಹೇಳಿಕೆ ನೀಡಿದ್ದಾರೆ. ಎರಡು ತಿಂಗಳು ಗಡುವು ಅಂತಲ್ಲಾ.

Murugesh Nirani There is no CM change in the Karnataka saaksha tv
Murugesh Nirani There is no CM change in the Karnataka saaksha tv

ಎರಡು ತಿಂಗಳಲ್ಲಿ ಸೂಕ್ತ ನಿರ್ಧಾರಕ್ಕೆ ಬರುತ್ತಾರೆ ಎಂಬ ವಿಶ್ವಾಸ ಇದೆ. ನಾನು ನನ್ನ ಖಾತೆಯಲ್ಲಿ ತೃಪ್ತಿ ಹೊಂದಿದ್ದೇನೆ. ಈ ಖಾತೆಯನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಗಮನ ಹರಿಸುತ್ತೇನೆ ಎಂದು ತಿಳಿಸಿದರು.

ಮಹಾರಾಷ್ಟ್ರ ಸರ್ಕಾರದ ಅಸ್ಥಿರತೆ ವಿಚಾರವಾಗಿ ಮಾತನಾಡಿ, ಅದು ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ನವರ ಜೊತೆ ಹೊಂದಾಣಿಕೆ ಆಗದೇ  ಬೇಸತ್ತು, ಶಿವಸೇನೆ, ಹಾಗೂ ಎನ್ ಸಿ ಪಿ ಅವರು ಬಿಟ್ಟು ಬಂದಿದ್ದಾರೆ.

ಸ್ಟೇರಿಂಗ್, ಬ್ರೇಕ್,‌ಎಕ್ಸಲೇಟರ್ ಇದು ಬೇರೆ ಬೇರೆ ವ್ಯಕ್ತಿಗಳ ಜೊತೆ ಇದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರದಲ್ಲಿ ಅಪಘಾತ ಹೆಚ್ಚಾಗುವ‌ ಸಾಧ್ಯತೆ ಇದೆ.

ಹಾಗಾಗಿ ಅಸಮಾಧಾನಿತರು ಬಿಜೆಪಿಗೆ ಬೆಂಬಲಿಸುವ ಸಾಧ್ಯತೆ ಇದೆ. ಮುಂದಿನ ದಿನದಲ್ಲಿ ಬಿಜೆಪಿ ಸರ್ಕಾರ ಮಹಾಷ್ಟ್ರದಲ್ಲಿ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd