ಮರುಘಾ ಶರಣರಿಗೆ ಜೈಲೋ ? ಬೇಲೋ ?
ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ಪೊಲೀಸ್ ಕಸ್ಟಡಿ ಕೊನೆಯಾಗಲಿದ್ದು, ಶ್ರೀಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಶ್ರೀಗಳಿಗೆ ಇಂದು ಜಾಮೀನು ಸಿಗುತ್ತಾ? ಅಥವಾ ನ್ಯಾಯಾಂಗ ಬಂಧನಕ್ಕೆ ಒಳಗಾಗುತ್ತಾರಾ ಎನ್ನುವುದು ಇಂದೇ ನಿರ್ಧಾರವಾಗಲಿದೆ.
ಆದ್ರೆ ಶ್ರೀಗಳ ಮೇಲೆ ಪೋಕ್ಸೋ ಕೇಸ್ ದಾಖಲಾಗಿರುವ ಕಾರಣ ಚಾರ್ಜ್ ಶೀಟ್ ಸಲ್ಲಿಕೆಯಾಗುವವರೆಗೂ ಜಾಮೀನು ಸಿಗುವುದು ಅನುಮಾನ ಎನ್ನಲಾಗುತ್ತಿದೆ.
ಕಳೆದ ಮೂರು ದಿನಗಳಿಂದ ಮುರುಘಾ ಶರಣರು ಪೊಲೀಸ್ ಕಸ್ಟಡಿಯಲ್ಲಿದ್ದರು. ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಜೆಎಂಎಫ್ ಸಿ ಕೋರ್ಟ್ ಗೆ ಅವರನ್ನು ಹಾಜರು ಪಡಿಸಲಾಗುತ್ತದೆ.
ಈ ವೇಳೆ ಶ್ರೀಗಳ ಪರ ವಕೀಲರು ಜಾಮೀನು ನೀಡುವಂತೆ ನ್ಯಾಯಾಧೀಶರ ಮುಂದೆ ಮನವಿ ಮಾಡಲಿದ್ದಾರೆ. ಇದಕ್ಕೆ ನ್ಯಾಯಾಧೀಶರು ಒಪ್ಪುತ್ತಾರೋ ಇಲ್ಲವೋ ಎಂಬುದು ಕುತೂಹಲವಾಗಿದೆ.
ಒಂದು ವೇಳೆ ಶರಣರ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತಿರಸ್ಕರಿಸಿದರೇ ಮುರುಘಾ ಶರಣರಿಗೆ ಮತ್ತೆ ಜೈಲುವಾಸ ಪಕ್ಕಾ ಆಗಲಿದೆ. murugha-mutt-shri-bail-application-hearing