ಮಸ್ಕಿ ಉಪಚುನಾವಣೆ ಸಿಎಂ ಬಿಎಸ್‍ವೈರಿಂದ ಭರ್ಜರಿ ಮತಬೇಟೆ
ರಾಯಚೂರು : ಜಿಲ್ಲೆಯ ಮಸ್ಕಿ ಉಪಚುನಾವಣೆ ಹಿನ್ನೆಲೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ಮತ ಪ್ರಚಾರ ನಡೆಸಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಗೆ ಮಸ್ಕಿ ಕ್ಷೇತ್ರದ ತುರ್ವಿಹಾಳ ಗ್ರಾಮದಲ್ಲಿ ಬಿಜೆಪಿ ಸಮಾವೇಶವನ್ನು ಸಸಿಗೆ ನೀರು ಹಾಕುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಉದ್ಘಾಟನೆ ಮಾಡಿ ಮಾತನಾಡಿದರು.
ಈ ಬಾರಿ ಬಜೆಟಿನಲ್ಲಿ 33 ಸಾವಿರ ಕೋಟಿ ರೂಪಾಯಿಯನ್ನು ಮಹಿಳೆಯರಿಗಾಗಿ ಮೀಸಲಿಡಲಾಗಿದೆ. ಎರಡು ಕೋಟಿ ರೂಪಾಯಿಗಳಷ್ಟು ಶೇಕಡಾ 4ರ ಬಡ್ಡಿದರದಲ್ಲಿ ಸ್ವ ಉದ್ಯೊಗಕ್ಕಾಗಿ ಮೀಸಲಿಡಲಾಗಿದೆ. ಎರಡು ವರ್ಷದಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲಾಗುವುದು ಎಂದರು.
ಈ ಬಾರಿ ಮೂರು ಉಪ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಮಸ್ಕಿ ಕ್ಷೇತ್ರದ ಪ್ರತಾಪ್ ಗೌಡರ 25 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ.
ರಾಜ್ಯದಲ್ಲಿ ಭಾಗ್ಯಲಕ್ಷ್ಮಿ ಯೋಜನೆ ಕಿಸಾನ್ ಸಮ್ಮಾನ್ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಸೇರಿದಂತೆ ಅನೇಕ ಯೋಜನೆಗಳನ್ನು ನೀಡಲಾಗಿದೆ. ಈ ಭಾಗದ ಮುಖ್ಯ ಬೇಡಿಕೆಯಾದ ಕನಕನ ಯೋಜನೆಯನ್ನು ಪರಿಪೂರ್ಣ ನೀರಾವರಿ ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಮಹಿಳೆಯರ ಬೇಡಿಕೆಯಾದ ಗಾಮೆರ್ಂಟ್ ಕೈಗಾರಿಕೆಯನ್ನು ಮುಂಚಿತವಾಗಿ ಮಹಿಳೆಯರಿಗೆ ತರಬೇತಿ ಕೇಂದ್ರ ಪ್ರಾರಂಭವಾದ ನಂತರ ಕೈಗಾರಿಕೆ ಆರಂಭಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಚುನಾವಣೆ ನಂತರ 50000 ಜನರೊಂದಿಗೆ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡು ಈ ಭಾಗಕ್ಕೆ ಅಗತ್ಯವಾದ ಮೂಲಭೂತ ಸೌಲಭ್ಯಕ್ಕೆ ಯೋಜನೆ ರೂಪಿಸಲಾಗುವುದು ಎನ್ನುವ ಭರವಸೆ ನೀಡಿದರು.