ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದಕ್ಕೆ ಮುಸ್ಲಿಂ ಯುವತಿ, ಕುಟುಂಬದ ಮೇಲೆ ಹಲ್ಲೆ : ದೂರು ದಾಖಲಿಸಿಕೊಳ್ಳದ ಪೊಲೀಸರು..!
ಉತ್ತರಪ್ರದೇಶ : ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕಾಗಿ ಇಡೀ ದೇಶಾದ್ಯಂತ ದೇಣಿಗೆ ಸಂಗ್ರಹವಾಗುತ್ತಿದೆ. ಇದೇ ರೀತಿ ಮುಸ್ಲಿಂ ಕುಟುಂಬವೂ ಕೂಡ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದೆ. ಆದ್ರೆ ಮಂದಿರ ನಿರ್ಮಾಣಕ್ಕೆ ಹಣ ಕೊಟ್ಟಿದ್ದಕ್ಕೆ ಆ ಕುಟುಂಬದ ಮೇಲೆ ಹಲ್ಲೆ ಮಾಡಲಾಗಿದೆ.
ಬ್ರೈನ್ ಟ್ಯೂಮರ್ ಇದ್ದ ಹೆಂಡತಿಗೆ ಚಿಕಿತ್ಸೆ ಕೊಡಿಸಲಾಗದೇ ಪ್ರಾಣವನ್ನೇ ತೆಗೆದ ಪತಿ..!
ಹೌದು ಉತ್ತರಪ್ರದೇಶದ ಬಿಜ್ನೋರ್ ನಲ್ಲಿ ನಹ್ತೌರ್ ನಿವಾಸಿ ತಸ್ಲೀಮ್ ಫಾತಿಮಾ ಎಂಬ ಯುವತಿಯು ರಾಮ ಮಂದಿರ ನಿರ್ಮಾಣಕ್ಕಾಗಿ 21,000 ರೂ ಹಣವನ್ನ ದೇಣಿಗೆ ನೀಡಿದ್ದಾರೆ. ಆದ್ರೆ ಇದರಿಂದ ಆಕೆಯ ಸಮುದಾಯದವರು ಆಕ್ರೋಶಗೊಂಡು ಆಕೆ ಹಾಗೂ ಆಕೆಯ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ. ಸಂತ್ರಸ್ತೆಯು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ಆದ್ರೆ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ಯುವತಿಯ ಕುಟುಂಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಬೆದರಿಕೆಗಳನ್ನ ಹಾಕಲಾಗ್ತಿದೆ ಎನ್ನಲಾಗಿದೆ.








