ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಮುಸ್ಲಿಂ ಸಂಘಟನೆ : ಈಶ್ವರಪ್ಪ
ಶಿವಮೊಗ್ಗ : ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಮುಸ್ಲಿಂ ಸಂಘಟನೆ ಇರುವ ಅನುಮಾನ ಕಾಡುತ್ತಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣದಲ್ಲಿ ಯಾವುದೋ ಮುಸ್ಲಿಂ ಸಂಘಟನೆಯೇ ಭಾಗಿಯಾಗಿದೆ ಎಂಬ ಅನುಮಾನ ಕಾಡುತ್ತಿದೆ.
ಬೆಡ್ ಬ್ಲಾಕ್ ಮಾಡಿಕೊಂಡಿರುವುದರಲ್ಲಿ ಅತಿ ಹೆಚ್ಚು ಮುಸ್ಲಿಮರು ಇರುವುದು ಕಾಣುತ್ತಿದೆ. ರಾಜ್ಯದಲ್ಲಿ ಹಾಗೋ ಹೀಗೋ ಕೊರೊನಾ ಮ್ಯಾನೇಜ್ ಮಾಡುತ್ತಿದ್ದೇವೆ.
ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬ ಪ್ರಯತ್ನವನ್ನು ಕೆಲವು ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಇದರ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಲ್ಲಿ ಗೊತ್ತಾಗಲಿದೆ. ಅದು ಸಂಘಟನೆಯೋ, ವ್ಯಕ್ತಿಗಳೋ ಸ್ಪಷ್ಟ ಆಗಬೇಕಾಗುತ್ತದೆ. ತಪ್ಪಿತಸ್ಥರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.