ಹಿಂದೂಯೇತರ ವ್ಯಾಪಾರಿ ಅಂಗಡಿ ಧ್ವಂಸ | ಶ್ರೀರಾಮ ಸೇನೆಯ ನಾಲ್ವರ ಬಂಧನ
ಧಾರವಾಡ: ಕಲ್ಲಂಗಡಿ ಹಣ್ಣು ವ್ಯಾಪಾರ ಮಾಡುತ್ತಿದ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿಗಳನ್ನು ಒಡೆದು ಹಾಕಿದ್ದ, ಶ್ರೀರಾಮ ಸೇನೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಬಂಧಿತರು. ನಬಿಸಾಬ್ ಮಾಲೀಕತ್ವದ ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಮಾಡಲಾಗಿತ್ತು.
ನಡೆದಿದ್ದೇನು?: ಧಾರವಾಡ ಹೊರವಲಯದ ನುಗ್ಗಿಕೇರಿ ಆಂಜನೇಯ ಸ್ವಾಮಿ ದೇವಸ್ಥಾನ ಪ್ರಸಿದ್ಧಿ ಪಡೆದ ದೇವಸ್ಥಾನವಾಗಿದೆ. ಈ ದೇವಸ್ಥಾನಕ್ಕೆ ಪ್ರತಿ ಶನಿವಾರ ಸಾವಿರಾರು ಭಕ್ತು ಬಂದು ದೇವರ ದರ್ಶನ ಪಡೆಯುತ್ತಾರೆ. ಈ ದೇವಸ್ಥಾನದ ಆವರಣದಲ್ಲಿ 4 ಹಿಂದೂಯೇತರ ಅಂಗಡಿಗಳಿದ್ದು, ಕಳೆದ 15 ದಿನಗಳಿಂದ
ಗಲಾಟೆ ಸಂಬಂಧ ನಬಿಸಾಬ್ ಅವರು ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೂರು ಸ್ವೀಕರಿಸಿರುವ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. , ಕಳೆದ 15 ದಿನಗಳ ಹಿಂದೆ ಶ್ರೀರಾಮ ಸೇನೆಯ ಕಾರ್ಯಕರ್ತರು ದೇವಸ್ಥಾನದ ಬಳಿ ಬಂದು ಪ್ರತಿಭಟನೆ ಮಾಡಿದ್ದರು.
ಹಾಗೇ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕೆಂದು ಮನವಿ ಮಾಡಿದ್ದರು. ಶನಿವಾರ ಹಿಂದೂಯೇತರ ಅಂಗಡಿಗಳು ಮುಚ್ಚದೇ ಇದ್ದಿದ್ದರಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಂಗಡಿಗಳಲ್ಲಿದ್ದ ಕಲ್ಲಂಗಡಿ ಹಣ್ಣು ಹಾಗೂ ತೆಂಗಿನಕಾಯಿಗಳನ್ನು ಒಡೆದು ಹಾಕಿದ್ದರು.