ಕೋಲಾರದಲ್ಲಿ ಕಾಂಗ್ರೆಸ್ ಬಾವುಟ ಹಾರಿಸೋದೆ ನನ್ನ ಗುರಿ : ಅರಿಕೆರೆ ಮಂಜುನಾಥ್ ಗೌಡ Kolar saaksha tv
ಕೋಲಾರ : ಸಮಾಜ ಸೇವೆಯ ಧ್ಯೇಯದೊಂದಿಗೆ ಕ್ಷೇತ್ರಕ್ಕೆ ಬಂದಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಅರಿಕೆರೆ ಮಂಜುನಾಥ್‌ಗೌಡ ಹೇಳಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಲಾರ- ಚಿಕ್ಕಬಳ್ಳಾಪುರ ವಿಧಾನಪರಿಷತ್ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಭ್ಯಾರ್ಥಿ ಗೆಲುವು ಸಾಧಿಸಿದ ಹಿನ್ನೆಲೆ ಮತದಾರರು ಹಾಗೂ ಗೆಲುವಿಗೆ ಕಾರಣರಾದ ಪಕ್ಷದ ಹಿರಿಯ ನಾಯಕರು, ಶಾಸಕರಿಗೆ ಧನ್ಯವಾದ ತಿಳಿಸಿದರು.
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾವುಟ ಹಾರಿಸುವುದು ನನ್ನ ಮೊದಲ ಗುರಿ, ‘ಕಾಂಗ್ರೆಸ್‌ನಿಂದ ಅವಕಾಶ ನೀಡಿದರೆ ಎದುರಾಳಿಗಳ ಸ್ಪರ್ಧೆಗೆ ಪೈಪೋಟಿಯಾಗಿ ಸಕಲ ರೀತಿಯಲ್ಲೂ ಸಿದ್ಧನಾಗಿ ಚುನಾವಣೆ ಎದುರಿಸುತ್ತೇನೆ’ ಎಂದರು.
ಕಾಂಗ್ರೆಸ್ ವರಿಷ್ಠರ ಸೂಚನೆಯಂತೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಬೂತ್ ಮಟ್ಟದಿಂದ ಪಕ್ಷ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಿಂದ ಸಂಘಟನೆಗೆ ಮುಂದಾಗುತ್ತಿರುವೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿತವಾಗಿದ್ದರೆ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್‌ನಲ್ಲಿ ಸ್ಥಳೀಯವಾಗಿ ನಾನು ಯಾವುದೇ ಬಣದ ಪರವಾಗಿಲ್ಲ. ನನಗೆ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷದಲ್ಲಿ ಸಂಘಟನೆ ಮುಖ್ಯವೇ ಹೊರತು ಗುಂಪುಗಾರಿಕೆಗೆ ಮೌಲ್ಯವಿರುವುದಿಲ್ಲ.
ನನ್ನದು ಕಾಂಗ್ರೆಸ್ ಬಣ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸಲು ವರಿಷ್ಠರು ನನಗೆ ಜವಾಬ್ದಾರಿ ನೀಡಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ.
ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ, ಕಾಂಗ್ರೆಸ್ ಹೈಕಮಾಂಡ್ ಮುಂಬರುವ ವಿಧಾನಸಭಾ ಚುನಾವಣೆಗೆ ಕ್ಷೇತ್ರದಿಂದ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ.
ಇದು ಪಕ್ಷದ ಪ್ರತಿ ಕಾರ್ಯಕರ್ತನ ಜವಾಬ್ದಾರಿ. ನಾನು ಸಹ ಕರ್ಮಯೋಗಿಯಂತೆ ಪಕ್ಷದ ಏಳಿಗೆಗೆ ದುಡಿಯುತ್ತೇನೆ. ನನಗೆ ಅದೃಷ್ಟವಿದ್ದರೆ ಟಿಕೆಟ್ ಸಿಕ್ಕಿ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುತ್ತೇನೆ ಎಂದರು









