ಮೈಸೂರು: ಮೇಕೆದಾಟು ಯೋಜನೆ ಯಶಸ್ಸಿಗೆ ಪ್ರಯತ್ನ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಘೋಷ್ಠಿಯಲ್ಲ ಮಾತನಾಡಿದ ಅವರು, ಒಂದೇ ರಾತ್ರಿಯಲ್ಲಿ ಮೇಕೆದಾಟು ಯೋಜನೆ ಜಾರಿಗೆ ತರಲು ಆಗುವುದಿಲ್ಲ. ರಾಜ್ಯದ ನಾಲ್ಕು ಜಲಾಶಯಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ. ಕರ್ನಾಟಕದವರೇ ಕಟ್ಟಿರುವುದು. ಆದರೆ, ಕುಮಾರಸ್ವಾಮಿ ಎಲ್ಲವನ್ನೂ ನಮ್ಮತ್ತ ಬೊಟ್ಟು ಮಾಡಿ, ತಾವೇನು ಮಾಡುತ್ತಿಲ್ಲ. ಹಾಗಾದರೆ, ಕಾವೇರಿ ನೀರು ಬಿಡುವ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಜತೆ ಚರ್ಚೆ ಮಾಡಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರ (Union Government) ಬಜೆಟ್ ನಲ್ಲಿ (Budget)ರಾಜ್ಯಕ್ಕೆ ಯಾವುದೇ ಅನುದಾನ ಘೋಷಣೆ ಮಡದೆ ಅನ್ಯಾಯ ಮಾಡಿದೆ ಎದು ರಾಜ್ಯ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ (Congress) ನಾಯಕರು ಈ ನಡವಳಿಕೆ ಬದಲಾವಣೆ ಮಾಡಿಕೊಳ್ಳಲಿ. ಮೊದಲು ನಿಮ್ಮ ಸಣ್ಣತನ ಬಿಟ್ಟುಬಿಡಿ. ಕೇಂದ್ರದ ವಿರುದ್ಧ ಸುಮ್ಮನೇ ಆರೋಪ ಮಾಡುವುದು ಸರಿಯಲ್ಲ. ನೀವು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರದ ಮುಂದೆ ಸಮರ್ಥವಾಗಿ ಇಡಬೇಕು. ಅದು ಬಿಟ್ಟು ಎಲ್ಲದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂ. ಹಣ ಘೋಷಿಸಿದೆ. ಅನುದಾನ ಕೊಟ್ಟಿಲ್ಲ ಎಂದು ಕಾಂಗರೆಸ್ ಆರೋಪಿಸುತ್ತಿದೆ. ಆದರೆ, ಕೇಂದ್ರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗುತ್ತಿಲ್ಲ. ಇದು ಕೇವಲ ಆರೋಪ ಮಾಡಿ, ತನ್ನ ತಪ್ಪುಗಳನ್ನು ಕೇಂದ್ರದ ಮೇಲೆ ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶ ವಿಭಜನೆಯಾದ ನಂತರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡಲಾಗುತ್ತಿದೆ. ಆಂಧ್ರದ ಪೋಲಾವರಂ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಬಿಹಾರದಲ್ಲಿ ಮಳೆಗಾಲದಲ್ಲಿ ನೆರೆಯಿಂದ ಉಂಟಾಗುತ್ತಿರುವ ಹಾನಿ ತಡೆಯುವ ಸಲುವಾಗಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಈ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ನಮ್ಮ ರಾಜ್ಯಕ್ಕೆ ವಿಶೇಷ ಆದ್ಯತೆ ನೀಡುವಂತೆ ಮನವಿ ಮಾಡಿದ್ದರು. ಹಾಗೆ ಕೇಂದ್ರ ಸರ್ಕಾರಕ್ಕೆ ಮಾಡಿಕೊಳ್ಳಬೇಕು. ವಾಸ್ತವತೆ ತಿಳಿಸಬೇಕು ಎಂದು ಹೇಳಿದ್ದಾರೆ.








