ರಶ್ಮಿಕಾಗೆ ತಮಿಳು ಮನೆಯ ಸೊಸೆ ಆಗುವ ಆಸೆಯಂತೆ..!
ಕನ್ನಡದ ಕಿರಿಕ್ ಪಾರ್ಟಿ ಮೂಲಕ ಹಿಟ್ ಆಗಿ ತೆಲುಗು , ತಮಿಳು , ಇದೀಗ ಬಾಲಿವುಡ್ ನಲ್ಲೂ ಮಿಂಚುತ್ತಿರುವ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಮಿಳಿನಲ್ಲಿಯೂ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕಾರ್ತಿ ಜೊತೆಗೆ ಮಾಡಿರುವ ತಮಿಳಿನ ಸಿನಿಮಾ ಹಿಟ್ ಆಗ್ತಿದ್ದಂತೆ ತಮ್ಮದೊಂದು ಆಸೆಯನ್ನ ಹೇಳಿಕೊಂಡಿದ್ದಾರೆ.
ಹೌದು ತಮಿಳು ಮನೆಯ ಸೊಸೆ ಆಗಬೇಕು ಅನ್ನೋದು ನನ್ನ ಆಸೆ ಎಂದು ಹೇಳುವ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗ್ತಿದ್ದಾರೆ. ‘ನನಗೆ ತಮಿಳು ಸಂಸ್ಕೃತಿ, ಸಂಪ್ರದಾಯ ಅಂದರೆ ತುಂಬಾ ಇಷ್ಟ. ತಮಿಳರ ಊಟ, ಆಹಾರ ಪದಾರ್ಥಗಳು ಬಹಳ ಇಷ್ಟವಾಗುತ್ತದೆ. ತಮಿಳರ ಮನೆಯ ಸೊಸೆ ಆಗಬೇಕು ಅನ್ನೋದೆ ನನ್ನ ಆಸೆ ಎಂದು ಹೇಳಿಕೊಂಡಿದ್ದಾರೆ.
ಇತ್ತ ಈ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗ್ತಿದ್ದಂತೆ ರಶ್ಮಿಕಾ ಟ್ರೋಲ್ ಗೂ ಗುರಿಯಾಗಿದ್ಧಾರೆ.. ಸದ್ಯ ರಶ್ಮಿಕಾ ಬಾಲಿವುಡ್ ನಲ್ಲಿ ಅಮಿತಾಬ್ ಬಚ್ಚನ್ ಅವರ ಗುಡ್ ಬಾಯ್ ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಆದ್ರೆ ಕೋವಿಡ್ ನಿಂದಾಗಿ ಶೂಟಿಂಗ್ ಸ್ಥಗೊತಗೊಂಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.










