ಸಿಎಂ ರೇಸ್ ನಲ್ಲಿ ನನ್ನ ಹೆಸರು ಮಾಧ್ಯಮಗಳ ಸೃಷ್ಠಿ : ಜೋಶಿ
ಧಾರವಾಡ : ಮುಖ್ಯಮಂತ್ರಿ ರೇಸ್‍ನಲ್ಲಿ ನನ್ನ ಹೆಸರಿರುವುದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಹುತೇಕ ಖಚಿತವಾಗಿದ್ದು, ಮುಂದಿನ ಸಿಎಂ ಯಾರು ಎಂಬ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ರೇಸ್ ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಸರು ಬಂದಿದೆ.
ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವಿಚಾರಗಳನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ.
ಬಿ.ಎಸ್.ಯಡಿಯೂರಪ್ಪ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆ ಆದರಿಸಿ ನಾನು ಹೇಳುವುದಾದರೆ, ಬಿಎಸ್ವೈ ಮತ್ತು ಬಿಜೆಪಿ ಹೈಕಮಾಂಡ ಮಧ್ಯ ಏನೋ ಮಾತುಕತೆ ನಡೆದಿರಬಹುದು.
ಆದರೆ ಅದು ಏನು ಎಂಬುದು ನನಗೂ ಸಹ ಗೊತ್ತಿಲ್ಲ. ಆ ಯಾವುದೇ ಚರ್ಚೆಯಲ್ಲಿ ನಾನಿಲ್ಲ. ಮುಖ್ಯಮಂತ್ರಿ ರೇಸ್‍ನಲ್ಲಿ ನನ್ನ ಹೆಸರಿರುವುದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು.
ರಾಜ್ಯದಲ್ಲಿ ರಾಜಕೀಯ ವಿಪ್ಲವ ಆಗುವುದು ಖಚಿತವಾಗಿದ್ದು, ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತ ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ, ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಅಶ್ವಥ್ ನಾರಾಯಣ್ ಹೆಸರು ಕೇಳಿಬರುತ್ತಿದೆ.









