ಅಕ್ರಮ ಗಣಿಗಾರಿಕೆ ನಿಲ್ಲಿಸುವುದೇ ನನ್ನ ಹೋರಾಟ : ಸುಮಲತಾ ಅಂಬರೀಶ್ Sumalatha
ಬೆಂಗಳೂರು : ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ರಾಜಭವನದ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅವರು, ನಾನು ಸಮಸ್ಯೆ ಸೃಷ್ಟಿಸಿಲ್ಲ, ಯಾರು ಸಮಸ್ಯೆ ಸೃಷ್ಟಿಸಿದಾರೋ ಅವರು ಅರ್ಥ ಮಾಡ್ಕೊಂಡ್ರೆ ಸಾಕು. ಅಕ್ರಮ ಗಣಿಗಾರಿಕೆ ನಿಲ್ಲಿಸುವ ವಿಚಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಕಷ್ಟ ಅಂತ ನನಗೂ ಗೊತ್ತು. ಆದರೆ ನನ್ನ ಪ್ರಯತ್ನ ನಾನು ಮಾಡುತ್ತೇನೆ. ಸಂಸತ್ ನಲ್ಲೂ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ಪ್ರಸ್ತಾಪ ಮಾಡ್ತೇನೆ. ಈ ಸಂಬಂಧ ಸಿಎಂ ಅವರನ್ನೂ, ಗಣಿ ಸಚಿವರನ್ನೂ ಭೇಟಿ ಮಾಡ್ತೇನೆ ಎಂದು ತಿಳಿಸಿದರು.
ಇನ್ನು ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತದೆ. ನಾನು ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರ ಬಗ್ಗೆ ಪ್ರತಿಕ್ರಿಯೆ ನೀಡಿದರು.









