ನನ್ನ ಗುರಿ ಮುಂದಿನ ವಿಧಾನಸಭಾ ಚುನಾವಣೆ : ಹೆಚ್ ಡಿಕೆ H D Kumaraswamy saaksha tv
ಮೈಸೂರು : ನನ್ನ ಗುರಿ ಇರೋದು ಮುಂದಿನ ವಿಧಾನಸಭಾ ಚುನಾವಣೆ ಮೇಲೆ. 123 ಕ್ಷೇತ್ರಗಳನ್ನು ಗೆದ್ದು ಅಧಿಕಾರ ಹಿಡಿಯಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ಅವರ ಜೆಡಿಎಸ್ ನಲ್ಲಿ ಶಂಖ ಊದುವುದಕ್ಕೆ ಜನ ಇಲ್ಲ ಎಂಬ ಹೇಳಿಕೆಗೆ ತಿರುಗೇಟು ನೀಡಿದರು.
ನಮ್ಮ ಶಂಖವನ್ನ ನಾನೇ ಊದಬೇಕು. ಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ನಾನೇ ಪ್ರಚಾರ ಮಾಡುತ್ತೇನೆ.
ನಮಗೆ ಕಾರ್ಯಕರ್ತರೇ ಶಕ್ತಿ, ಕಾರ್ಯಕರ್ತರಿಗೆ ನಾಯಕನನ್ನು ಹುಟ್ಟುಹಾಕುವ ಸಾಮಥ್ರ್ಯ ಇರೋದು.
ಹೀಗಾಗಿ ಬಂಡೇಳುವ ಶಾಸಕರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ.
ಪರ್ಯಾಯ ನಾಯಕರನ್ನು ಕಾರ್ಯಕರ್ತರೇ ಹುಡುಕಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.
ಇನ್ನು ಇದೇ ವೇಳೆ ಚುನಾವಣೆ ಎದುರಿಸಲು ಮಾನಸಿಕವಾಗಿ ಸಿದ್ದರಿದ್ದೇವೆ ಎಂದ ಕುಮಾರಸ್ವಾಮಿ, ನನ್ನ ಗುರಿ ಇರೋದು ಮುಂದಿನ ವಿಧಾನಸಭಾ ಚುನಾವಣೆ ಮೇಲೆ. 123 ಕ್ಷೇತ್ರಗಳನ್ನು ಗೆದ್ದು ಅಧಿಕಾರ ಹಿಡಿಯಬೇಕಿದೆ ಎಂದರು.









